AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 27th June: ಚಿನ್ನ, ಬೆಳ್ಳಿ ಎರಡೂ ಬೆಲೆ ಇಂದು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 27th: ಚಿನ್ನ, ಬೆಳ್ಳಿ ಬೆಲೆ ಎರಡೂ ಗುರುವಾರ ಇಳಿಕೆ ಕಂಡಿವೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,000 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 90 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,000 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,095 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 27th June: ಚಿನ್ನ, ಬೆಳ್ಳಿ ಎರಡೂ ಬೆಲೆ ಇಂದು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 27, 2024 | 5:00 AM

Share

ಬೆಂಗಳೂರು, ಜೂನ್ 27: ಬೆಳ್ಳಿ ಬೆಲೆ ಜೊತೆಗೆ ಚಿನ್ನದ ಬೆಲೆಯೂ (Gold and silver Rates) ಸತತವಾಗಿ ಇಳಿಕೆ ಕಾಣುತ್ತಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಇಳಿದಿದೆ. ವಿದೇಶಗಳಲ್ಲಿ ಕುವೇತ್ ಮೊದಲಾದ ಕೆಲ ದೇಶ ಹೊರತುಪಡಿಸಿ ಉಳಿದ ಹೆಚ್ಚಿನ ಕಡೆ ಚಿನ್ನದ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆ ಕಡಿಮೆ ಆಗಿದೆ. ಈ ವಾರದ ಆರಂಭದಿಂದಲೂ ಬೆಳ್ಳಿ ಬೆಲೆ ಸತತವಾಗಿ ಕುಸಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,095 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 27ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 909.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,000 ರೂ
  • ಚೆನ್ನೈ: 66,600 ರೂ
  • ಮುಂಬೈ: 66,000 ರೂ
  • ದೆಹಲಿ: 66,150 ರೂ
  • ಕೋಲ್ಕತಾ: 66,000 ರೂ
  • ಕೇರಳ: 66,000 ರೂ
  • ಅಹ್ಮದಾಬಾದ್: 66,050 ರೂ
  • ಜೈಪುರ್: 66,150 ರೂ
  • ಲಕ್ನೋ: 66,150 ರೂ
  • ಭುವನೇಶ್ವರ್: 66,000 ರೂ

ಇದನ್ನೂ ಓದಿ: 5ಜಿ ಸ್ಪೆಕ್ಟ್ರಂ ಎಂದರೇನು? 900 ಮೆಗಾಹರ್ಟ್ಜ್ ಇತ್ಯಾದಿ ಬ್ಯಾಂಡ್​ವಿಡ್ತ್​ಗಳ ಉಪಯೋಗ ಏನು? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (61,140 ರುಪಾಯಿ)
  • ದುಬೈ: 2,597.50 ಡಿರಾಮ್ (59,110 ರುಪಾಯಿ)
  • ಅಮೆರಿಕ: 710 ಡಾಲರ್ (59,350 ರುಪಾಯಿ)
  • ಸಿಂಗಾಪುರ: 978 ಸಿಂಗಾಪುರ್ ಡಾಲರ್ (60,250 ರುಪಾಯಿ)
  • ಕತಾರ್: 2,640 ಕತಾರಿ ರಿಯಾಲ್ (60,530 ರೂ)
  • ಸೌದಿ ಅರೇಬಿಯಾ: 2,660 ಸೌದಿ ರಿಯಾಲ್ (59,270 ರುಪಾಯಿ)
  • ಓಮನ್: 277 ಒಮಾನಿ ರಿಯಾಲ್ (60,140 ರುಪಾಯಿ)
  • ಕುವೇತ್: 220 ಕುವೇತಿ ದಿನಾರ್ (59,990 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,095 ರೂ
  • ಚೆನ್ನೈ: 9,450 ರೂ
  • ಮುಂಬೈ: 9,000 ರೂ
  • ದೆಹಲಿ: 9,000 ರೂ
  • ಕೋಲ್ಕತಾ: 9,000 ರೂ
  • ಕೇರಳ: 9,450 ರೂ
  • ಅಹ್ಮದಾಬಾದ್: 9,000 ರೂ
  • ಜೈಪುರ್: 9,000 ರೂ
  • ಲಕ್ನೋ: 9,000 ರೂ
  • ಭುವನೇಶ್ವರ್: 9,450 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ