ಬೆಂಗಳೂರು, ಜೂನ್ 27: ಬೆಳ್ಳಿ ಬೆಲೆ ಜೊತೆಗೆ ಚಿನ್ನದ ಬೆಲೆಯೂ (Gold and silver Rates) ಸತತವಾಗಿ ಇಳಿಕೆ ಕಾಣುತ್ತಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 25 ರೂನಷ್ಟು ಇಳಿದಿದೆ. ವಿದೇಶಗಳಲ್ಲಿ ಕುವೇತ್ ಮೊದಲಾದ ಕೆಲ ದೇಶ ಹೊರತುಪಡಿಸಿ ಉಳಿದ ಹೆಚ್ಚಿನ ಕಡೆ ಚಿನ್ನದ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ 10 ಪೈಸೆ ಕಡಿಮೆ ಆಗಿದೆ. ಈ ವಾರದ ಆರಂಭದಿಂದಲೂ ಬೆಳ್ಳಿ ಬೆಲೆ ಸತತವಾಗಿ ಕುಸಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,095 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: 5ಜಿ ಸ್ಪೆಕ್ಟ್ರಂ ಎಂದರೇನು? 900 ಮೆಗಾಹರ್ಟ್ಜ್ ಇತ್ಯಾದಿ ಬ್ಯಾಂಡ್ವಿಡ್ತ್ಗಳ ಉಪಯೋಗ ಏನು? ಇಲ್ಲಿದೆ ಡೀಟೇಲ್ಸ್
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ