AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 28 June: ಬೆಳ್ಳಿ ಬೆಲೆ ಏರಿಕೆ, ವಿದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ, ಇವತ್ತು ಭಾರತದಲ್ಲೂ ಸ್ವರ್ಣ ದುಬಾರಿಯಾಗುವ ಸಾಧ್ಯತೆ; ಇಲ್ಲಿದೆ ಇತ್ತೀಚಿನ ದರ

Bullion Market 2023, June 28th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,180 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 71.50 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 28 June: ಬೆಳ್ಳಿ ಬೆಲೆ ಏರಿಕೆ, ವಿದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ, ಇವತ್ತು ಭಾರತದಲ್ಲೂ ಸ್ವರ್ಣ ದುಬಾರಿಯಾಗುವ ಸಾಧ್ಯತೆ; ಇಲ್ಲಿದೆ ಇತ್ತೀಚಿನ ದರ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 28, 2023 | 5:00 AM

Share

ಬೆಂಗಳೂರು: ಚಿನ್ನದ ಬೆಲೆ (Gold Rates) ಏರಿಕೆಯ ಹಾದಿಯಲ್ಲಿ ಮುಂದುವರಿಯುತ್ತಿದೆ. ಸತತವಾಗಿ ಇಳಿಕೆ ಕಾಣುತ್ತಿರುವ ಬೆಳ್ಳಿ ಬೆಲೆ ಅಪರೂಪಕ್ಕೆಂಬಂತೆ ಏರಿಕೆ ಕಂಡಿದೆ. ಭಾರತದಲ್ಲಿ ಅಪರಂಜಿ ಚಿನ್ನ ತುಸು ಇಳಿಕೆಯಾದರೂ ವಿದೇಶಗಳಲ್ಲಿ ಸ್ವರ್ಣಕ್ಕೆ ಬೇಡಿಕೆ ಹೆಚ್ಚಾಗಿದ್ದು, ಬೆಲೆ ತುಟ್ಟಿಯಾಗಿದೆ. ದುಬೈ ಬಿಟ್ಟು ಉಳಿದೆಡೆ ಅದರ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,025 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 28ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 715 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,280 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 702.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,350 ರೂ
  • ಚೆನ್ನೈ: 54,750 ರೂ
  • ಮುಂಬೈ: 54,350 ರೂ
  • ದೆಹಲಿ: 54,500 ರೂ
  • ಕೋಲ್ಕತಾ: 54,350 ರೂ
  • ಕೇರಳ: 54,350 ರೂ
  • ಅಹ್ಮದಾಬಾದ್: 54,350 ರೂ
  • ಜೈಪುರ್: 54,500 ರೂ
  • ಲಕ್ನೋ: 54,500 ರೂ
  • ಭುವನೇಶ್ವರ್: 54,350 ರೂ

ಇದನ್ನೂ ಓದಿIndian Economy: ಮುಂದಿನ 3 ವರ್ಷವೂ ಅತಿವೇಗದಲ್ಲಿ ಭಾರತದ ಆರ್ಥಿಕವೃದ್ಧಿ: ಎಸ್ ಅಂಡ್ ಪಿ ಗ್ಲೋಬಲ್ ರೇಟಿಂಗ್ಸ್ ಸಂಸ್ಥೆ ಅಂದಾಜು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (50,774 ರುಪಾಯಿ)
  • ದುಬೈ: 2157.50 ಡಿರಾಮ್ (48,155 ರುಪಾಯಿ)
  • ಅಮೆರಿಕ: 590 ಡಾಲರ್ (48,389 ರುಪಾಯಿ)
  • ಸಿಂಗಾಪುರ: 810 ಸಿಂಗಾಪುರ್ ಡಾಲರ್ (49,262 ರುಪಾಯಿ)
  • ಕತಾರ್: 2,230 ಕತಾರಿ ರಿಯಾಲ್ (50,208 ರೂ)
  • ಓಮನ್: 236 ಒಮಾನಿ ರಿಯಾಲ್ (50,244 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,486 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,025 ರೂ
  • ಚೆನ್ನೈ: 7,570 ರೂ
  • ಮುಂಬೈ: 7,150 ರೂ
  • ದೆಹಲಿ: 7,150 ರೂ
  • ಕೋಲ್ಕತಾ: 7,150 ರೂ
  • ಕೇರಳ: 7,570 ರೂ
  • ಅಹ್ಮದಾಬಾದ್: 7,150 ರೂ
  • ಜೈಪುರ್: 7,150 ರೂ
  • ಲಕ್ನೋ: 7,150 ರೂ
  • ಭುವನೇಶ್ವರ್: 7,570 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?