Gold Silver Price on 28th June: ಚಿನ್ನದ ಬೆಲೆ ಮತ್ತೆ ಇಳಿಕೆ; ಗ್ರಾಮ್​ಗೆ 25 ರೂನಷ್ಟು ಕಡಿಮೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 28th: ಚಿನ್ನದ ಬೆಲೆ ಸತತ ಇಳಿಕೆ ಕಾಣುತ್ತಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,730 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 90 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 65,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 28th June: ಚಿನ್ನದ ಬೆಲೆ ಮತ್ತೆ ಇಳಿಕೆ; ಗ್ರಾಮ್​ಗೆ 25 ರೂನಷ್ಟು ಕಡಿಮೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Jun 28, 2024 | 5:01 AM

ಬೆಂಗಳೂರು, ಜೂನ್ 28: ಬೆಳ್ಳಿ ಬೆಲೆಯಂತೆ ಚಿನ್ನದ ಬೆಲೆಯೂ (Gold and silver Rates) ಸತತವಾಗಿ ಇಳಿಕೆ ಕಾಣುತ್ತಿದೆ. ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್​ಗೆ 25 ರೂನಷ್ಟು ಕಡಿಮೆ ಆಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಕಂಡಿದೆ. ಸತತ ಮೂರ್ನಾಲ್ಕು ಬಾರಿ ಇಳಿಕೆ ಕಂಡಿದ್ದ ಬೆಳ್ಳಿ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 65,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 71,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 65,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,950 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 895 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 65,750 ರೂ
  • ಚೆನ್ನೈ: 66,250 ರೂ
  • ಮುಂಬೈ: 65,750 ರೂ
  • ದೆಹಲಿ: 65,900 ರೂ
  • ಕೋಲ್ಕತಾ: 65,750 ರೂ
  • ಕೇರಳ: 65,750 ರೂ
  • ಅಹ್ಮದಾಬಾದ್: 65,800 ರೂ
  • ಜೈಪುರ್: 65,900 ರೂ
  • ಲಕ್ನೋ: 65,900 ರೂ
  • ಭುವನೇಶ್ವರ್: 65,750 ರೂ

ಇದನ್ನೂ ಓದಿ: ಜುಲೈ ತಿಂಗಳಲ್ಲಿ 12 ದಿನ ರಜೆಗಳಿವೆ; ನಿಮ್ಮ ಊರಲ್ಲಿ ಯಾವ್ಯಾವತ್ತು ರಜೆ? ಇಲ್ಲಿದೆ ಪಟ್ಟಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,430 ರಿಂಗಿಟ್ (60,690 ರುಪಾಯಿ)
  • ದುಬೈ: 2,595 ಡಿರಾಮ್ (58,960 ರುಪಾಯಿ)
  • ಅಮೆರಿಕ: 705 ಡಾಲರ್ (58,840 ರುಪಾಯಿ)
  • ಸಿಂಗಾಪುರ: 978 ಸಿಂಗಾಪುರ್ ಡಾಲರ್ (60,170 ರುಪಾಯಿ)
  • ಕತಾರ್: 2,630 ಕತಾರಿ ರಿಯಾಲ್ (60,200 ರೂ)
  • ಸೌದಿ ಅರೇಬಿಯಾ: 2,660 ಸೌದಿ ರಿಯಾಲ್ (59,170 ರುಪಾಯಿ)
  • ಓಮನ್: 275 ಒಮಾನಿ ರಿಯಾಲ್ (59,610 ರುಪಾಯಿ)
  • ಕುವೇತ್: 218.50 ಕುವೇತಿ ದಿನಾರ್ (59,450 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,950 ರೂ
  • ಚೆನ್ನೈ: 9,450 ರೂ
  • ಮುಂಬೈ: 9,000 ರೂ
  • ದೆಹಲಿ: 9,000 ರೂ
  • ಕೋಲ್ಕತಾ: 9,000 ರೂ
  • ಕೇರಳ: 9,450 ರೂ
  • ಅಹ್ಮದಾಬಾದ್: 9,000 ರೂ
  • ಜೈಪುರ್: 9,000 ರೂ
  • ಲಕ್ನೋ: 9,000 ರೂ
  • ಭುವನೇಶ್ವರ್: 9,450 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us