ಬೆಂಗಳೂರು: ಚಿನ್ನದ ಬೆಲೆ (Gold Rates) ಏರಿಕೆಯ ಹಾದಿಯಿಂದ ಬದಿಗೆ ಸರಿದು ತುಸು ಇಳಿಕೆ ಕಂಡಿದೆ. ಬೆಳ್ಳಿ ಬೆಲೆ ಅಪರೂಪಕ್ಕೆಂಬಂತೆ ಸತತ ಏರಿಕೆ ಕಂಡಿದೆ. ಭಾರತ ಸೇರಿದಂತೆ ವಿಶ್ವದ ಹಲವು ಮರುಕಟ್ಟೆಗಳಲ್ಲಿ ಚಿನ್ನದ ಬೆಲೆಗಳು ಇಳಿದಿವೆ. ದುಬೈನಲ್ಲಿ ಚಿನ್ನದ ಬೆಲೆ ಮತ್ತೆ 48,000 ರೂ ಒಳಗೆ ಬಂದಿದೆ. ಇನ್ನು, ಬೆಳ್ಳಿ ಬೆಲೆ ಸತತ ಎರಡನೇ ಬಾರಿ ಹೆಚ್ಚಾಗಿದೆ. ಇದೇ ವೇಳೆ, ಇಂದು ಚಿನ್ನದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,050 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 58,960 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,190 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,125 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Mahila Samman Scheme: ಮಹಿಳಾ ಸಮ್ಮಾನ್ ಉಳಿತಾಯ ಪತ್ರ ಅಂಚೆ ಕಚೇರಿ ಮಾತ್ರವಲ್ಲ ಈ 16 ಬ್ಯಾಂಕುಗಳಲ್ಲೂ ಲಭ್ಯ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ