AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 2 June: ಮತ್ತೆ ಇಳಿಕೆಯ ಹಾದಿಗಿಳಿದ ಚಿನ್ನ ಮತ್ತು ಬೆಳ್ಳಿ ಬೆಲೆಗಳು; ಇಲ್ಲಿದೆ ಹೊಸ ದರಗಳ ಪಟ್ಟಿ

Bullion Market 2023, June 2nd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,760 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 72.80 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 2 June: ಮತ್ತೆ ಇಳಿಕೆಯ ಹಾದಿಗಿಳಿದ ಚಿನ್ನ ಮತ್ತು ಬೆಳ್ಳಿ ಬೆಲೆಗಳು; ಇಲ್ಲಿದೆ ಹೊಸ ದರಗಳ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 02, 2023 | 5:10 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಜೂನ್ 2ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 55,700 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,280 ರೂ ಇದೆ.
  • ಭಾರತದಲ್ಲಿ ಚಿನ್ನದ ಬೆಲೆ ಕಡಿಮೆ ಆದರೂ ವಿದೇಶ ಮಾರುಕಟ್ಟೆಗಳಲ್ಲಿ ಬೆಲೆ ತುಸು ಏರಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ.

ಬೆಂಗಳೂರು: ಭಾರತದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಇಳಿದಿವೆ. ಆದರೆ, ವಿದೇಶಗಳ ಚಿನಿವಾರಪೇಟೆಗಳಲ್ಲಿ ಬೆಲೆ ಇಳಿದಿಲ್ಲ. ಕೆಲವೆಡೆ ಏರಿಕೆಯೇ ಆಗಿದೆ. ಇಂದು ಮಧ್ಯಾಹ್ನದ ಬಳಿಕ ಭಾರತದಲ್ಲೂ ಸ್ವಲ್ಪ ಚಿನ್ನದ ಬೆಲೆ ಏರುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,280 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿEconomy: 2022-23ರಲ್ಲಿ ಭಾರತಕ್ಕೆ ಒಳ್ಳೆಯ ಜಿಡಿಪಿ ಸಿಗಲು ಹೂಡಿಕೆಗಳೇ ಕಾರಣ ಎಂತಾರೆ ಆರ್ಥಿಕ ತಜ್ಞರು; ಅದು ಹೇಗೆ ಸಾಧ್ಯ?

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 2ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 728 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,810 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,750 ರೂ
  • ಚೆನ್ನೈ: 56,200 ರೂ
  • ಮುಂಬೈ: 55,700 ರೂ
  • ದೆಹಲಿ: 55,850 ರೂ
  • ಕೋಲ್ಕತಾ: 55,700 ರೂ
  • ಕೇರಳ: 55,700 ರೂ
  • ಅಹ್ಮದಾಬಾದ್: 55,750 ರೂ
  • ಜೈಪುರ್: 55,850 ರೂ
  • ಲಕ್ನೋ: 55,850 ರೂ
  • ಭುವನೇಶ್ವರ್: 55,700 ರೂ

ಇದನ್ನೂ ಓದಿGST Collection: ಮೇ ತಿಂಗಳಲ್ಲಿ ಜಿಎಸ್​ಟಿ ಸಂಗ್ರಹ 1.57 ಲಕ್ಷ ಕೋಟಿ ರೂ; ಕರ್ನಾಟಕದಲ್ಲಿ ತೆರಿಗೆ ಕಲೆಕ್ಷನ್ ಎಷ್ಟು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,880 ರಿಂಗಿಟ್ (51,468 ರುಪಾಯಿ)
  • ದುಬೈ: 2195 ಡಿರಾಮ್ (49,257 ರುಪಾಯಿ)
  • ಅಮೆರಿಕ: 605 ಡಾಲರ್ (49,868 ರುಪಾಯಿ)
  • ಸಿಂಗಾಪುರ: 826 ಸಿಂಗಾಪುರ್ ಡಾಲರ್ (50,238 ರುಪಾಯಿ)
  • ಕತಾರ್: 2,265 ಕತಾರಿ ರಿಯಾಲ್ (51,447 ರೂ)
  • ಓಮನ್: 239.50 ಒಮಾನಿ ರಿಯಾಲ್ (51,275 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,521 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,760 ರೂ
  • ಮುಂಬೈ: 7,280 ರೂ
  • ದೆಹಲಿ: 7,280 ರೂ
  • ಕೋಲ್ಕತಾ: 7,280 ರೂ
  • ಕೇರಳ: 7,300 ರೂ
  • ಅಹ್ಮದಾಬಾದ್: 7,280 ರೂ
  • ಜೈಪುರ್: 7,280 ರೂ
  • ಲಕ್ನೋ: 7,280 ರೂ
  • ಭುವನೇಶ್ವರ್: 7,760 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ