AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 3 June: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆ; ಭಾರತ ಹಾಗೂ ವಿದೇಶಗಳಲ್ಲಿ ಎಷ್ಟಿದೆ ಹೊಸ ದರ, ಇಲ್ಲಿದೆ ಪಟ್ಟಿ

Bullion Market 2023, June 3rd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,100 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.40 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 3 June: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆ; ಭಾರತ ಹಾಗೂ ವಿದೇಶಗಳಲ್ಲಿ ಎಷ್ಟಿದೆ ಹೊಸ ದರ, ಇಲ್ಲಿದೆ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 03, 2023 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಜೂನ್ 3ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 56,000 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,360 ರೂ ಇದೆ.
  • ದುಬೈ ಹೊರತುಪಡಿಸಿ ಉಳಿದ ಬಹುತೇಕ ವಿದೇಶಗಳಲ್ಲಿ ಚಿನ್ನದ ಬೆಲೆ ತೀರಾ ಹೆಚ್ಚಾಗಿದೆ. ದುಬೈನಲ್ಲಿ ಏರಿಕೆಯಾದರೂ ಬೆಲೆ 50,000 ರೂ ಮಟ್ಟಕ್ಕಿಂತ ಕೆಳಗೆ ಇದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,050 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರೂ ಇದೆ.

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಮತ್ತೆ ಏರಿವೆ. ಈ ವಾರದಲ್ಲಿ ಮೂರು ಬಾರಿ ಬೆಲೆ ಏರಿಕೆಯಾಗಿದೆ. ವಿದೇಶಗಳ ಎಲ್ಲ ಮಾರುಕಟ್ಟೆಗಳಲ್ಲೂ ಚಿನ್ನ ದುಬಾರಿಯಾಗಿದೆ. ಅಮೆರಿಕದಲ್ಲಿ ಚಿನ್ನದ ಬೆಲೆ 50,000 ರೂ ಮಟ್ಟಕ್ಕಿಂತ ಮೇಲೆ ಹೋಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,340 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿKarnataka Guarantee Cost: ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳ ಜಾರಿಗೆ ಆಗುವ ವೆಚ್ಚವೆಷ್ಟು? ಹಣಕಾಸು ಹೊಂದಿಸಲು ಯಾವ್ಯಾವ ಬೆಲೆ ಏರಬಹುದು?

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 3ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,100 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 734 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,150 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,050 ರೂ
  • ಚೆನ್ನೈ: 56,380 ರೂ
  • ಮುಂಬೈ: 56,000 ರೂ
  • ದೆಹಲಿ: 56,150 ರೂ
  • ಕೋಲ್ಕತಾ: 56,000 ರೂ
  • ಕೇರಳ: 56,000 ರೂ
  • ಅಹ್ಮದಾಬಾದ್: 56,050 ರೂ
  • ಜೈಪುರ್: 56,150 ರೂ
  • ಲಕ್ನೋ: 56,150 ರೂ
  • ಭುವನೇಶ್ವರ್: 56,000 ರೂ

ಇದನ್ನೂ ಓದಿArecanut Price: 02 ಜೂನ್ ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (51,972 ರುಪಾಯಿ)
  • ದುಬೈ: 2220 ಡಿರಾಮ್ (49,758 ರುಪಾಯಿ)
  • ಅಮೆರಿಕ: 610 ಡಾಲರ್ (50,214 ರುಪಾಯಿ)
  • ಸಿಂಗಾಪುರ: 828 ಸಿಂಗಾಪುರ್ ಡಾಲರ್ (50,637 ರುಪಾಯಿ)
  • ಕತಾರ್: 2,285 ಕತಾರಿ ರಿಯಾಲ್ (51,662 ರೂ)
  • ಓಮನ್: 242 ಒಮಾನಿ ರಿಯಾಲ್ (51,743 ರುಪಾಯಿ)
  • ಕುವೇತ್: 189 ಕುವೇತಿ ದಿನಾರ್ (50,587 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,450 ರೂ
  • ಚೆನ್ನೈ: 7,860 ರೂ
  • ಮುಂಬೈ: 7,340 ರೂ
  • ದೆಹಲಿ: 7,340 ರೂ
  • ಕೋಲ್ಕತಾ: 7,340 ರೂ
  • ಕೇರಳ: 7,450 ರೂ
  • ಅಹ್ಮದಾಬಾದ್: 7,340 ರೂ
  • ಜೈಪುರ್: 7,340 ರೂ
  • ಲಕ್ನೋ: 7,340 ರೂ
  • ಭುವನೇಶ್ವರ್: 7,860 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ