Gold Silver Price on 3rd June: ಚಿನ್ನ, ಬೆಳ್ಳಿ ಎರಡೂ ಇಂದು ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 June 3rd: ಚಿನ್ನ, ಬೆಳ್ಳಿ ಬೆಲೆ ಇಂದು ಸೋಮವಾರ ತುಸು ಇಳಿಕೆ ಕಂಡಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 93.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 3rd June: ಚಿನ್ನ, ಬೆಳ್ಳಿ ಎರಡೂ ಇಂದು ಅಲ್ಪ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Jun 03, 2024 | 5:00 AM

ಬೆಂಗಳೂರು, ಜೂನ್ 3: ಕಳೆದ ಕೆಲ ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಸಾಕಷ್ಟು ಏರಿಳಿತಗಳನ್ನು ಕಂಡಿದೆ. ಇಂದು ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಮತ್ತು ಬೆಳ್ಳಿ ಬೆಲೆ ಗ್ರಾಮ್​ಗೆ 20 ಪೈಸೆ ಏರಿಕೆ ಆಗಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಕಡಿಮೆ ಆಗಿದೆ. ಈ ವಾರವೂ ಈ ಏರಿಳಿತ ಮುಂದುವರಿಯುವ ಸಂಭವ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,550 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 935 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,550 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 930 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,500 ರೂ
  • ಚೆನ್ನೈ: 67,100 ರೂ
  • ಮುಂಬೈ: 66,500 ರೂ
  • ದೆಹಲಿ: 66,650 ರೂ
  • ಕೋಲ್ಕತಾ: 66,500 ರೂ
  • ಕೇರಳ: 66,500 ರೂ
  • ಅಹ್ಮದಾಬಾದ್: 66,550 ರೂ
  • ಜೈಪುರ್: 66,650 ರೂ
  • ಲಕ್ನೋ: 66,650 ರೂ
  • ಭುವನೇಶ್ವರ್: 66,500 ರೂ

ಇದನ್ನೂ ಓದಿ: ಕಳೆದ 10 ವರ್ಷದಲ್ಲಿ ಒಮ್ಮೆಯೂ ನೆಗಟಿವ್ ರಿಟರ್ನ್ಸ್ ಕೊಟ್ಟಿಲ್ಲ 36 ಈಕ್ವಿಟಿ ಮ್ಯೂಚುವಲ್ ಫಂಡ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (61,690 ರುಪಾಯಿ)
  • ದುಬೈ: 2,610 ಡಿರಾಮ್ (59,300 ರುಪಾಯಿ)
  • ಅಮೆರಿಕ: 715 ಡಾಲರ್ (59,660 ರುಪಾಯಿ)
  • ಸಿಂಗಾಪುರ: 983 ಸಿಂಗಾಪುರ್ ಡಾಲರ್ (60,710 ರುಪಾಯಿ)
  • ಕತಾರ್: 2,660 ಕತಾರಿ ರಿಯಾಲ್ (60,890 ರೂ)
  • ಸೌದಿ ಅರೇಬಿಯಾ: 2,670 ಸೌದಿ ರಿಯಾಲ್ (59,400 ರುಪಾಯಿ)
  • ಓಮನ್: 281.50 ಒಮಾನಿ ರಿಯಾಲ್ (61,010 ರುಪಾಯಿ)
  • ಕುವೇತ್: 221 ಕುವೇತಿ ದಿನಾರ್ (60,100 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,300 ರೂ
  • ಚೆನ್ನೈ: 9,800 ರೂ
  • ಮುಂಬೈ: 9,350 ರೂ
  • ದೆಹಲಿ: 9,350 ರೂ
  • ಕೋಲ್ಕತಾ: 9,350 ರೂ
  • ಕೇರಳ: 9,800 ರೂ
  • ಅಹ್ಮದಾಬಾದ್: 9,350 ರೂ
  • ಜೈಪುರ್: 9,350 ರೂ
  • ಲಕ್ನೋ: 9,350 ರೂ
  • ಭುವನೇಶ್ವರ್: 9,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us