AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 4th June: ಚಿನ್ನ ಗ್ರಾಂಗೆ 40 ರೂ ಇಳಿಕೆ; ಬೆಳ್ಳಿಯೂ ತುಸು ಅಗ್ಗ

Bullion Market 2024 June 4th: ಇಂದು ಮಂಗಳವಾರ ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,110 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 92.80 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,100 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,290 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 4th June: ಚಿನ್ನ ಗ್ರಾಂಗೆ 40 ರೂ ಇಳಿಕೆ; ಬೆಳ್ಳಿಯೂ ತುಸು ಅಗ್ಗ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 04, 2024 | 5:00 AM

Share

ಬೆಂಗಳೂರು, ಜೂನ್ 4: ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಇಳಿದಿವೆ. ಚಿನ್ನದ ಬೆಲೆ ಗ್ರಾಮ್​ಗೆ 40 ರೂ ಇಳಿದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 70 ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಬಹಳಷ್ಟು ಹೂಡಿಕೆಗಳು ಷೇರು ಮಾರುಕಟ್ಟೆಯತ್ತ ಹರಿಯತೊಡಗಿವೆ. ಚಿನ್ನದ ಬೆಲೆ ಮತ್ತಷ್ಟು ಕುಗ್ಗುಸ ಸಂಭವ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,280 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,290 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 4ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 928 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,110 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 929 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,100 ರೂ
  • ಚೆನ್ನೈ: 66,660 ರೂ
  • ಮುಂಬೈ: 66,100 ರೂ
  • ದೆಹಲಿ: 66,250 ರೂ
  • ಕೋಲ್ಕತಾ: 66,100 ರೂ
  • ಕೇರಳ: 66,100 ರೂ
  • ಅಹ್ಮದಾಬಾದ್: 66,150 ರೂ
  • ಜೈಪುರ್: 66,250 ರೂ
  • ಲಕ್ನೋ: 66,250 ರೂ
  • ಭುವನೇಶ್ವರ್: 66,100 ರೂ

ಇದನ್ನೂ ಓದಿ: ತುರ್ತು ಸಾಲ ಎಂದರೇನು? ಅರ್ಜೆಂಟಾಗಿ ಪಾಸ್‌ಬುಕ್ ಲೋನ್ ಸಿಗುತ್ತದಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (61,480 ರುಪಾಯಿ)
  • ದುಬೈ: 2,607.50 ಡಿರಾಮ್ (59,030 ರುಪಾಯಿ)
  • ಅಮೆರಿಕ: 715 ಡಾಲರ್ (59,460 ರುಪಾಯಿ)
  • ಸಿಂಗಾಪುರ: 980 ಸಿಂಗಾಪುರ್ ಡಾಲರ್ (60,300 ರುಪಾಯಿ)
  • ಕತಾರ್: 2,645 ಕತಾರಿ ರಿಯಾಲ್ (60,330 ರೂ)
  • ಸೌದಿ ಅರೇಬಿಯಾ: 2,670 ಸೌದಿ ರಿಯಾಲ್ (59,190 ರುಪಾಯಿ)
  • ಓಮನ್: 281 ಒಮಾನಿ ರಿಯಾಲ್ (60,690 ರುಪಾಯಿ)
  • ಕುವೇತ್: 221 ಕುವೇತಿ ದಿನಾರ್ (59,920 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,290 ರೂ
  • ಚೆನ್ನೈ: 9,730 ರೂ
  • ಮುಂಬೈ: 9,280 ರೂ
  • ದೆಹಲಿ: 9,280 ರೂ
  • ಕೋಲ್ಕತಾ: 9,280 ರೂ
  • ಕೇರಳ: 9,730 ರೂ
  • ಅಹ್ಮದಾಬಾದ್: 9,280 ರೂ
  • ಜೈಪುರ್: 9,280 ರೂ
  • ಲಕ್ನೋ: 9,280 ರೂ
  • ಭುವನೇಶ್ವರ್: 9,730 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್, ಡಿಸೇಲ್ ಏರಿಕೆ ಭೀತಿ! ಪೆಟ್ರೋಲ್ ಬಂಕ್​ಗಳಿಗೆ ಮುಗಿಬಿದ್ದ ಜನ
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ರೋಚಕ ಪಂದ್ಯದಲ್ಲಿ 2 ರನ್​ಗಳ ಜಯ ಸಾಧಿಸಿ ಫೈನಲ್​ಗೇರಿದ ಹೈದರಾಬಾದ್
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಅಳಿಯನ ಮನೆಗೇ ಕನ್ನ ಹಾಕಿ ಸಿಕ್ಕಿಬಿದ್ದ ಅತ್ತೆ: ಕದ್ದ ಬಂಗಾರ ಎಷ್ಟು ಗೊತ್ತಾ?
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ: ಇಬ್ಬರು ಅಧಿಕಾರಿಗಳ ತಲೆಂಡ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಪಶ್ಚಿಮ ಬಂಗಾಳದ 15 ಬೂತ್​ಗಳಲ್ಲಿ ಮರು ಮತದಾನ: ಮತದಾರರ ಜೋಶ್​​ ನೋಡಿ
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಮರುಎಣಿಕೆಗೂ ಮೊದಲೇ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಬಾಕ್ಸ್​ ಸೀಲ್​​ ಓಪನ್​?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಫಲ ಸಿಗಬೇಕು ಎಂದರೆ ನೀವು ಯಾವ ದಿನ ಉಪವಾಸ ಮಾಡಬೇಕು ಗೊತ್ತಾ?
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ
ಶೀಘ್ರವೇ ದರ ಏರಿಕೆ ಶಾಕ್​​?: ಪೆಟ್ರೋಲ್​​ ರೇಟ್​​ 5 ರೂ. ಏರಿಕೆ ಸಾಧ್ಯತೆ