Gold Silver Price on 5 June: ಅಮೆರಿಕ, ದುಬೈ, ಸಿಂಗಾಪುರದಲ್ಲಿ ಚಿನ್ನ ಅಗ್ಗ; ಭಾರತ ಹಾಗೂ ಇತರೆಡೆ ಆಭರಣಪ್ರೇಮಿಗಳಿಗೆ ಖುಷಿ ಸುದ್ದಿ

|

Updated on: Jun 05, 2023 | 5:05 AM

Bullion Market 2023, June 5th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,330 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.00 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 5 June: ಅಮೆರಿಕ, ದುಬೈ, ಸಿಂಗಾಪುರದಲ್ಲಿ ಚಿನ್ನ ಅಗ್ಗ; ಭಾರತ ಹಾಗೂ ಇತರೆಡೆ ಆಭರಣಪ್ರೇಮಿಗಳಿಗೆ ಖುಷಿ ಸುದ್ದಿ
ಚಿನ್ನ
Follow us on

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and Silver Prices) ಏರಿಳಿತ ಕಳೆದ ಮೂರ್ನಾಲ್ಕು ವಾರಗಳಿಂದ ನಡೆದಿದೆ. ವಾರದಲ್ಲಿ ಎರಡು ದಿನ ಏರಿಕೆಯಾಗುವುದು, ಮೂರು ದಿನ ಇಳಿಕೆಯಾಗುವುದನ್ನು ನೋಡುತ್ತಿದ್ದೇವೆ. ಈಗ ದುಬೈ, ಅಮೆರಿಕ ಮತ್ತು ಸಿಂಗಾಪುರದಲ್ಲಿ ಚಿನ್ನದ ಬೆಲೆ 50,000 ರೂ ಗಡಿಯೊಳಗೆ ಬಂದಿದೆ. ದುಬೈನಲ್ಲಿ ಬೆಲೆ 40 ಸಾವಿರ ರೂ ಗಡಿಯಲ್ಲಿದೆ. ಭಾರತದಲ್ಲಿ ಚಿನ್ನದ ಬೆಲೆ 56,000 ರೂ ಗಡಿಯೊಳಗೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿGiga Factory: ಭಾರತದಲ್ಲಿ ಮೊದಲ ಬಾರಿಗೆ ಲಿಥಿಯಮ್ ಅಯಾನ್ ಸೆಲ್ ತಯಾರಿಕೆ; ಟಾಟಾದಿಂದ ಗೀಗಾ ಫ್ಯಾಕ್ಟರಿ ಸ್ಥಾಪನೆಗೆ ಒಪ್ಪಂದ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 5ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,350 ರೂ
  • ಚೆನ್ನೈ: 55,800 ರೂ
  • ಮುಂಬೈ: 55,300 ರೂ
  • ದೆಹಲಿ: 55,450 ರೂ
  • ಕೋಲ್ಕತಾ: 55,300 ರೂ
  • ಕೇರಳ: 55,300 ರೂ
  • ಅಹ್ಮದಾಬಾದ್: 55,350 ರೂ
  • ಜೈಪುರ್: 55,450 ರೂ
  • ಲಕ್ನೋ: 55,450 ರೂ
  • ಭುವನೇಶ್ವರ್: 55,300 ರೂ

ಇದನ್ನೂ ಓದಿBengalurean’s Case: ಬ್ಯಾಗ್ ಹಾಳಾಗಿದ್ದಕ್ಕೆ ಕುವೇತ್ ಏರ್​ವೇಸ್​ನಿಂದ ಪರಿಹಾರ ಕಕ್ಕಿಸಿದ ಬೆಂಗಳೂರಿಗ; ಗ್ರಾಹಕರ ಹಕ್ಕಿಗೆ ಇದೊಂದು ಮಾದರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (51,402 ರುಪಾಯಿ)
  • ದುಬೈ: 2185 ಡಿರಾಮ್ (49,025 ರುಪಾಯಿ)
  • ಅಮೆರಿಕ: 600 ಡಾಲರ್ (49,442 ರುಪಾಯಿ)
  • ಸಿಂಗಾಪುರ: 818 ಸಿಂಗಾಪುರ್ ಡಾಲರ್ (49,926 ರುಪಾಯಿ)
  • ಕತಾರ್: 2,250 ಕತಾರಿ ರಿಯಾಲ್ (50,922 ರೂ)
  • ಓಮನ್: 238 ಒಮಾನಿ ರಿಯಾಲ್ (51,028 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,182 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,450 ರೂ
  • ಚೆನ್ನೈ: 7,780 ರೂ
  • ಮುಂಬೈ: 7,300 ರೂ
  • ದೆಹಲಿ: 7,300 ರೂ
  • ಕೋಲ್ಕತಾ: 7,300 ರೂ
  • ಕೇರಳ: 7,780 ರೂ
  • ಅಹ್ಮದಾಬಾದ್: 7,300 ರೂ
  • ಜೈಪುರ್: 7,300 ರೂ
  • ಲಕ್ನೋ: 7,300 ರೂ
  • ಭುವನೇಶ್ವರ್: 7,780 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ