AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 6 June: ದುಬೈನಲ್ಲಿ ಚಿನ್ನ 49,000 ರೂಗಿಂತ ಕಡಿಮೆ; ಭಾರತ ಹಾಗು ಇತರೆಡೆ ಎಷ್ಟಿದೆ ಚಿನ್ನ, ಬೆಳ್ಳಿ ಬೆಲೆ?

Bullion Market 2023, June 6th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,330 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.00 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 6 June: ದುಬೈನಲ್ಲಿ ಚಿನ್ನ 49,000 ರೂಗಿಂತ ಕಡಿಮೆ; ಭಾರತ ಹಾಗು ಇತರೆಡೆ ಎಷ್ಟಿದೆ ಚಿನ್ನ, ಬೆಳ್ಳಿ ಬೆಲೆ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 06, 2023 | 5:05 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಜೂನ್ 6ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 55,300 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,300 ರೂ ಇದೆ.
  • ದುಬೈನಲ್ಲಿ ಚಿನ್ನದ ಬೆಲೆ 49,000 ರೂಗಿಂತ ಕಡಿಮೆಗೆ ಇಳಿದಿದೆ. ಅಮೆರಿಕ, ಸಿಂಗಾಪುರ ಮೊದಲಾದೆಡೆಯೂ ಬೆಲೆ ಇಳಿಕೆಯಾಗಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,350 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರೂ ಇದೆ.

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಇಳಿಕೆಯ ಹಾದಿಯಲ್ಲಿ ವಿರಾಮ ಹಾಕಿಕೊಂಡಿವೆ. ವಾರಾಂತ್ಯದಲ್ಲಿ ಭರ್ಜರಿ ಇಳಿಕೆ ಕಂಡಿದ್ದ ಈ ಅಮೂಲ್ಯ ಲೋಹಗಳ ಬೆಲೆ ಹೊಸ ವಾರದ ಆರಂಭದಲ್ಲಿ ಯಥಾಸ್ಥಿತಿ ಹೊಂದಿದೆ. ಆದರೆ, ದುಬೈ, ಅಬುಧಾಬಿ, ಶಾರ್ಜಾದಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿದಿದ್ದು ರೂಪಾಯಿ ಲೆಕ್ಕದಲ್ಲಿ ಬೆಲೆ 49,000 ರೂಗಿಂತ ಒಳಗಿದೆ. ಅಮೆರಿಕ ಮತ್ತು ಸಿಂಗಾಪುರದಲ್ಲೂ ಬೆಲೆ 50,000 ರೂ ಒಳಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ:

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 6ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,350 ರೂ
  • ಚೆನ್ನೈ: 55,800 ರೂ
  • ಮುಂಬೈ: 55,300 ರೂ
  • ದೆಹಲಿ: 55,450 ರೂ
  • ಕೋಲ್ಕತಾ: 55,300 ರೂ
  • ಕೇರಳ: 55,300 ರೂ
  • ಅಹ್ಮದಾಬಾದ್: 55,350 ರೂ
  • ಜೈಪುರ್: 55,450 ರೂ
  • ಲಕ್ನೋ: 55,450 ರೂ
  • ಭುವನೇಶ್ವರ್: 55,300 ರೂ

ಇದನ್ನೂ ಓದಿ:

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (51,120 ರುಪಾಯಿ)
  • ದುಬೈ: 2177.50 ಡಿರಾಮ್ (48,986 ರುಪಾಯಿ)
  • ಅಮೆರಿಕ: 600 ಡಾಲರ್ (49,525 ರುಪಾಯಿ)
  • ಸಿಂಗಾಪುರ: 817 ಸಿಂಗಾಪುರ್ ಡಾಲರ್ (49,931 ರುಪಾಯಿ)
  • ಕತಾರ್: 2,245 ಕತಾರಿ ರಿಯಾಲ್ (50,946 ರೂ)
  • ಓಮನ್: 238 ಒಮಾನಿ ರಿಯಾಲ್ (51,085 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,182 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,450 ರೂ
  • ಚೆನ್ನೈ: 7,780 ರೂ
  • ಮುಂಬೈ: 7,300 ರೂ
  • ದೆಹಲಿ: 7,300 ರೂ
  • ಕೋಲ್ಕತಾ: 7,300 ರೂ
  • ಕೇರಳ: 7,780 ರೂ
  • ಅಹ್ಮದಾಬಾದ್: 7,300 ರೂ
  • ಜೈಪುರ್: 7,300 ರೂ
  • ಲಕ್ನೋ: 7,300 ರೂ
  • ಭುವನೇಶ್ವರ್: 7,780 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ