Gold Silver Price on 6th June: ನಿನ್ನೆ ಏರಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2024 June 6th: ಚಿನ್ನದ ಬೆಲೆ ಗ್ರಾಮ್​ಗೆ 20 ರೂ, ಬೆಳ್ಳೀ ಬೆಲೆ ಗ್ರಾಮ್​ಗೆ 23 ಪೈಸೆಯಷ್ಟು ಕಡಿಮೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,650 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 91.80 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 66,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,190 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 6th June: ನಿನ್ನೆ ಏರಿದ್ದ ಚಿನ್ನ, ಬೆಳ್ಳಿ ಬೆಲೆ ಇಂದು ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Jun 06, 2024 | 5:00 AM

ಬೆಂಗಳೂರು, ಜೂನ್ 6: ನಿನ್ನೆ ಹೆಚ್ಚಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಇಂದು ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಇಳಿಕೆ ಆಗಿದೆ. ಬೆಳ್ಳಿ ಬೆಲೆ 2.30 ಪೈಸೆಯಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,180 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,190 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 6ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,650 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 917 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,650 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 919 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,600 ರೂ
  • ಚೆನ್ನೈ: 67,250 ರೂ
  • ಮುಂಬೈ: 66,600 ರೂ
  • ದೆಹಲಿ: 66,750 ರೂ
  • ಕೋಲ್ಕತಾ: 66,600 ರೂ
  • ಕೇರಳ: 66,600 ರೂ
  • ಅಹ್ಮದಾಬಾದ್: 66,650 ರೂ
  • ಜೈಪುರ್: 66,750 ರೂ
  • ಲಕ್ನೋ: 66,750 ರೂ
  • ಭುವನೇಶ್ವರ್: 66,600 ರೂ

ಇದನ್ನೂ ಓದಿ: ಒಂದೇ ದಿನ ಅತಿಹೆಚ್ಚು ಷೇರು ವಹಿವಾಟು; ಭಾರತದ ಎನ್​ಎಸ್​ಇ ಹೊಸ ವಿಶ್ವದಾಖಲೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,460 ರಿಂಗಿಟ್ (61,440 ರುಪಾಯಿ)
  • ದುಬೈ: 2,615 ಡಿರಾಮ್ (59,410 ರುಪಾಯಿ)
  • ಅಮೆರಿಕ: 710 ಡಾಲರ್ (59,240 ರುಪಾಯಿ)
  • ಸಿಂಗಾಪುರ: 983 ಸಿಂಗಾಪುರ್ ಡಾಲರ್ (60,840 ರುಪಾಯಿ)
  • ಕತಾರ್: 2,665 ಕತಾರಿ ರಿಯಾಲ್ (60,980 ರೂ)
  • ಸೌದಿ ಅರೇಬಿಯಾ: 2,680 ಸೌದಿ ರಿಯಾಲ್ (59,620 ರುಪಾಯಿ)
  • ಓಮನ್: 283 ಒಮಾನಿ ರಿಯಾಲ್ (61,330 ರುಪಾಯಿ)
  • ಕುವೇತ್: 222 ಕುವೇತಿ ದಿನಾರ್ (60,450 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,190 ರೂ
  • ಚೆನ್ನೈ: 9,620 ರೂ
  • ಮುಂಬೈ: 9,170 ರೂ
  • ದೆಹಲಿ: 9,170 ರೂ
  • ಕೋಲ್ಕತಾ: 9,170 ರೂ
  • ಕೇರಳ: 9,620 ರೂ
  • ಅಹ್ಮದಾಬಾದ್: 9,170 ರೂ
  • ಜೈಪುರ್: 9,170 ರೂ
  • ಲಕ್ನೋ: 9,170 ರೂ
  • ಭುವನೇಶ್ವರ್: 9,620 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us