AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 7 June: ಚಿನ್ನದ ಪ್ರೇಮಿಗಳಿಗೆ ಮತ್ತೆ ಬೆಲೆ ಏರಿಕೆ ಶಾಕ್; ಭಾರತ ಹಾಗೂ ವಿವಿಧೆಡೆ ಇವತ್ತು ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ಬೆಲೆ, ಇಲ್ಲಿದೆ ಡೀಟೇಲ್ಸ್

Bullion Market 2023, June 7th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,650 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.50 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 7 June: ಚಿನ್ನದ ಪ್ರೇಮಿಗಳಿಗೆ ಮತ್ತೆ ಬೆಲೆ ಏರಿಕೆ ಶಾಕ್; ಭಾರತ ಹಾಗೂ ವಿವಿಧೆಡೆ ಇವತ್ತು ಎಷ್ಟಿದೆ ಚಿನ್ನ ಮತ್ತು ಬೆಳ್ಳಿ ಬೆಲೆ, ಇಲ್ಲಿದೆ ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 07, 2023 | 5:00 AM

Share

ಬೆಂಗಳೂರು: ಭಾರತದಲ್ಲಿ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಏರತೊಡಗಿವೆ. ಭಾರತ ಮಾತ್ರವಲ್ಲ ಎಲ್ಲಾ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,350 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿCash Withdrawal: ಕಾರ್ಡ್ ಬೇಕಿಲ್ಲ, ಮೊಬೈಲ್​ನ ಯುಪಿಐ ಮೂಲಕವೇ ಎಟಿಎಂನಿಂದ ಹಣ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 7ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,650 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,700 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,650 ರೂ
  • ಚೆನ್ನೈ: 56,000 ರೂ
  • ಮುಂಬೈ: 55,600 ರೂ
  • ದೆಹಲಿ: 55,750 ರೂ
  • ಕೋಲ್ಕತಾ: 55,600 ರೂ
  • ಕೇರಳ: 55,600 ರೂ
  • ಅಹ್ಮದಾಬಾದ್: 55,650 ರೂ
  • ಜೈಪುರ್: 55,750 ರೂ
  • ಲಕ್ನೋ: 55,750 ರೂ
  • ಭುವನೇಶ್ವರ್: 55,600 ರೂ

ಇದನ್ನೂ ಓದಿArecanut Price 6 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (51,360 ರುಪಾಯಿ)
  • ದುಬೈ: 2200 ಡಿರಾಮ್ (49,456 ರುಪಾಯಿ)
  • ಅಮೆರಿಕ: 600 ಡಾಲರ್ (49,547 ರುಪಾಯಿ)
  • ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,344 ರುಪಾಯಿ)
  • ಕತಾರ್: 2,265 ಕತಾರಿ ರಿಯಾಲ್ (51,372 ರೂ)
  • ಓಮನ್: 240 ಒಮಾನಿ ರಿಯಾಲ್ (51,537 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,445 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,350 ರೂ
  • ಚೆನ್ನೈ: 7,800 ರೂ
  • ಮುಂಬೈ: 7,350 ರೂ
  • ದೆಹಲಿ: 7,350 ರೂ
  • ಕೋಲ್ಕತಾ: 7,350 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,350 ರೂ
  • ಜೈಪುರ್: 7,350 ರೂ
  • ಲಕ್ನೋ: 7,350 ರೂ
  • ಭುವನೇಶ್ವರ್: 7,800 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು