Gold Silver Price on 8 June: ಬೆಲೆ ಏರಿಕೆಯ ಶಾಕ್ ಬಳಿಕ ತಣ್ಣಗಾದ ಚಿನ್ನ ಮತ್ತು ಬೆಳ್ಳಿ ಬೆಲೆಗಳು; ಇವತ್ತೆಷ್ಟಿದೆ ರೇಟು, ಇಲ್ಲಿದೆ ಪಟ್ಟಿ

| Updated By: ನಯನಾ ರಾಜೀವ್

Updated on: Jun 08, 2023 | 9:38 AM

Bullion Market 2023, June 8th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,650 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.50 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 8 June: ಬೆಲೆ ಏರಿಕೆಯ ಶಾಕ್ ಬಳಿಕ ತಣ್ಣಗಾದ ಚಿನ್ನ ಮತ್ತು ಬೆಳ್ಳಿ ಬೆಲೆಗಳು; ಇವತ್ತೆಷ್ಟಿದೆ ರೇಟು, ಇಲ್ಲಿದೆ ಪಟ್ಟಿ
ಚಿನ್ನ
Follow us on

ಬೆಂಗಳೂರು: ಭರ್ಜರಿಯಾಗಿ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಸದ್ಯ ಓಟ ನಿಲ್ಲಿಸಿವೆ. ಮಲೇಷ್ಯಾದಲ್ಲಿ ತುಸು ಏರಿಕೆ ಬಿಟ್ಟರೆ ಉಳಿದಂತೆ ಭಾರತ ಹಾಗೂ ವಿಶ್ವದ ವಿವಿಧೆಡೆ ಚಿನ್ನದ ಬೆಲೆ ಅಲ್ಪವಿರಾಮ ಪಡೆದಿದೆ. ಭಾರತದಲ್ಲಿ ಬೆಳ್ಳಿ ಬೆಲೆಯೂ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,350 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,350 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿMSP Before 2014: ರೈತರ ಬೆಳೆಗಳಿಗೆ 2014ಕ್ಕೆ ಮುಂಚೆ ಎಂಎಸ್​ಪಿ ಎಷ್ಟಿತ್ತು, ಈಗೆಷ್ಟಿದೆ? ಇಲ್ಲಿದೆ ಒಂದು ಹೋಲಿಕೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 8ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,650 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,700 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,650 ರೂ
  • ಚೆನ್ನೈ: 56,000 ರೂ
  • ಮುಂಬೈ: 55,600 ರೂ
  • ದೆಹಲಿ: 55,750 ರೂ
  • ಕೋಲ್ಕತಾ: 55,600 ರೂ
  • ಕೇರಳ: 55,600 ರೂ
  • ಅಹ್ಮದಾಬಾದ್: 55,650 ರೂ
  • ಜೈಪುರ್: 55,750 ರೂ
  • ಲಕ್ನೋ: 55,750 ರೂ
  • ಭುವನೇಶ್ವರ್: 55,600 ರೂ

ಇದನ್ನೂ ಓದಿSandesara Brothers: ಭಾರತದಲ್ಲಿ ವಂಚಕರು, ನೈಜೀರಿಯಾದಲ್ಲಿ ಹೀರೋಗಳು… 14,000 ಕೋಟಿ ಪಂಗನಾಮಿ ಹಾಕಿ ಪರಾರಿಯಾದ ಸಂದೇಸರ ಸಹೋದರರ ಕರ್ಮಕಾಂಡ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (51,818 ರುಪಾಯಿ)
  • ದುಬೈ: 2200 ಡಿರಾಮ್ (49,456 ರುಪಾಯಿ)
  • ಅಮೆರಿಕ: 600 ಡಾಲರ್ (49,547 ರುಪಾಯಿ)
  • ಸಿಂಗಾಪುರ: 823 ಸಿಂಗಾಪುರ್ ಡಾಲರ್ (50,344 ರುಪಾಯಿ)
  • ಕತಾರ್: 2,265 ಕತಾರಿ ರಿಯಾಲ್ (51,372 ರೂ)
  • ಓಮನ್: 239.50 ಒಮಾನಿ ರಿಯಾಲ್ (51,536 ರುಪಾಯಿ)
  • ಕುವೇತ್: 188 ಕುವೇತಿ ದಿನಾರ್ (50,445 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,350 ರೂ
  • ಚೆನ್ನೈ: 7,800 ರೂ
  • ಮುಂಬೈ: 7,350 ರೂ
  • ದೆಹಲಿ: 7,350 ರೂ
  • ಕೋಲ್ಕತಾ: 7,350 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,350 ರೂ
  • ಜೈಪುರ್: 7,350 ರೂ
  • ಲಕ್ನೋ: 7,350 ರೂ
  • ಭುವನೇಶ್ವರ್: 7,800 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:54 am, Thu, 8 June 23