AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 9 June: ಬೆಲೆ ಏರಿಕೆಯ ಶಾಕ್ ಬಳಿಕ ತಣ್ಣಗಾದ ಚಿನ್ನ ಮತ್ತು ಬೆಳ್ಳಿ ಬೆಲೆಗಳು; ಇವತ್ತೆಷ್ಟಿದೆ ರೇಟು, ಇಲ್ಲಿದೆ ಪಟ್ಟಿ

Bullion Market 2023, June 9th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,220 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 73.40 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 9 June: ಬೆಲೆ ಏರಿಕೆಯ ಶಾಕ್ ಬಳಿಕ ತಣ್ಣಗಾದ ಚಿನ್ನ ಮತ್ತು ಬೆಳ್ಳಿ ಬೆಲೆಗಳು; ಇವತ್ತೆಷ್ಟಿದೆ ರೇಟು, ಇಲ್ಲಿದೆ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Jun 09, 2023 | 8:40 AM

Share

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಮತ್ತೆ ಇಳಿಕೆಯ ಹಾದಿಗೆ ಬಂದಿವೆ. ಅಂತಾರಾಷ್ಟ್ರೀಯ ವಿದ್ಯಮಾನಗಳ ಪರಿಣಾಮವಾಗಿ ಬೆಲೆ ಇಳಿಕೆ ಆಗುತ್ತಿದೆ. ಸಿಂಗಾಪುರ ಮತ್ತು ದುಬೈನಲ್ಲಿ ಬೆಲೆ ಬಹಳ ಕಡಿಮೆ ಆಗಿದೆ. ಭಾರತದಲ್ಲಿ ಎಲ್ಲೆಡೆಯೂ ಬೆಲೆ ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,340 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,340 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿArecanut Price 8 June: ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 9ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 734 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 734 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,250 ರೂ
  • ಚೆನ್ನೈ: 55,650 ರೂ
  • ಮುಂಬೈ: 55,200 ರೂ
  • ದೆಹಲಿ: 55,350 ರೂ
  • ಕೋಲ್ಕತಾ: 55,200 ರೂ
  • ಕೇರಳ: 55,200 ರೂ
  • ಅಹ್ಮದಾಬಾದ್: 55,250 ರೂ
  • ಜೈಪುರ್: 55,350 ರೂ
  • ಲಕ್ನೋ: 55,350 ರೂ
  • ಭುವನೇಶ್ವರ್: 55,200 ರೂ

ಇದನ್ನೂ ಓದಿIPO: ಐಪಿಒ ಷೇರುಗಳನ್ನು ಪಡೆಯಲು ಯುಪಿಐ ಬಳಸುವುದು ಹೇಗೆ? ಇಲ್ಲಿದೆ ಹಂತ ಹಂತದ ವಿಧಾನ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,890 ರಿಂಗಿಟ್ (51,629 ರುಪಾಯಿ)
  • ದುಬೈ: 2182.50 ಡಿರಾಮ್ (49,026 ರುಪಾಯಿ)
  • ಅಮೆರಿಕ: 600 ಡಾಲರ್ (49,506 ರುಪಾಯಿ)
  • ಸಿಂಗಾಪುರ: 816 ಸಿಂಗಾಪುರ್ ಡಾಲರ್ (50,037 ರುಪಾಯಿ)
  • ಕತಾರ್: 2,250 ಕತಾರಿ ರಿಯಾಲ್ (50,989 ರೂ)
  • ಓಮನ್: 238 ಒಮಾನಿ ರಿಯಾಲ್ (51,010 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,192 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,340 ರೂ
  • ಚೆನ್ನೈ: 7,770 ರೂ
  • ಮುಂಬೈ: 7,340 ರೂ
  • ದೆಹಲಿ: 7,340 ರೂ
  • ಕೋಲ್ಕತಾ: 7,340 ರೂ
  • ಕೇರಳ: 7,770 ರೂ
  • ಅಹ್ಮದಾಬಾದ್: 7,340 ರೂ
  • ಜೈಪುರ್: 7,340 ರೂ
  • ಲಕ್ನೋ: 7,340 ರೂ
  • ಭುವನೇಶ್ವರ್: 7,770 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:57 am, Fri, 9 June 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್