ಬೆಂಗಳೂರು, ಜೂನ್ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಈ ವಾರ ಇಳಿಕೆಗಿಂತ ಹೆಚ್ಚಳವಾಗಿದ್ದೇ ಹೆಚ್ಚು. ಕಳೆದ ಎರಡು ಮೂರು ದಿನದಲ್ಲಿ ಈ ಎರಡೂ ಲೋಹಗಳ ಬೆಲೆ ಏರಿಕೆ ಆಗಿದೆ. ಆದರೆ, ಕಳೆದ 10 ದಿನಗಳ ಬೆಲೆ ಪರಿಗಣಿಸಿದರೆ ಇಳಿಮುಖವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 67,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 73,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 67,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,325 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಮೇ 31ಕ್ಕೆ ಭಾರತದ ಫಾರೆಕ್ಸ್ ರಿಸರ್ವ್ಸ್ 651.5 ಬಿಲಿಯನ್ ಡಾಲರ್; ಇದು ಸಾರ್ವಕಾಲಿಕ ದಾಖಲೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 5:00 am, Sun, 9 June 24