Kannada News Business Gold Prices March 10th 2024, Gold and Silver Rates Continues to Move Upward On Weekend
Gold Silver Price on 10th March: ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
Bullion Market 2024: ಹೆಚ್ಚಿನ ಹೂಡಿಕೆದಾರರು ಡಾಲರ್ ಬಿಟ್ಟು ಚಿನ್ನದತ್ತ ವಲಸೆ ಬರತೊಡಗಿದ್ದಾರೆ. ಪರಿಣಾಮವಾಗಿ ಹಳದಿ ಲೋಹಕ್ಕೆ ಬೇಡಿಕೆ ಹೆಚ್ಚಾಗಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 65,730 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 75.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 60,250 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,450 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಮಾರ್ಚ್ 10: ಕಳೆದ ಹತ್ತು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಭರ್ಜರಿ ಏರಿಕೆ ಕಾಣುತ್ತಿದೆ. ಭಾರತ ಮಾತ್ರವಲ್ಲ, ಬಹುತೇಕ ಎಲ್ಲಾ ದೇಶಗಳ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 300 ರೂಗಿಂತ ಹೆಚ್ಚಾಗಿದೆ. ಅಮೆರಿಕದಲ್ಲಿ ಬಡ್ಡಿದರ ಕಡಿತಗೊಳ್ಳುವ ಸುಳಿವು ಸಿಕ್ಕಿರುವುದರಿಂದ ಈ ಬೆಳವಣಿಗೆ ಆಗಿದೆ. ಫೆಡರಲ್ ರಿಸರ್ವ್ ನಿರ್ಧಾರ ಪ್ರಕಟವಾಗುವವರೆಗೂ ಕಾದು ನೋಡುವ ಸಂಯಮ ಹೂಡಿಕೆದಾರರಿಗೆ ಇಲ್ಲವಾದಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,250 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 65,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,450 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 10ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,250 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)