ಬೆಂಗಳೂರು, ಮಾರ್ಚ್ 13: ಇವತ್ತು ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ (Gold and silver Rates) ಮಿಶ್ರ ಫಲ ಇದೆ. ಚಿನ್ನದ ಬೆಲೆ ತುಸು ಇಳಿಕೆ ಕಂಡರೆ, ಬೆಳ್ಳಿ ಬೆಲೆ ಸ್ವಲ್ಪ ಏರಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 1 ರೂ ಮಾತ್ರವೇ ತಗ್ಗಿದೆ. ಅಂತಾರಾಷ್ಟ್ರೀಯವಾಗಿ ಬಹುತೇಕ ಬೆಲೆ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆ ಭಾರತದಲ್ಲಿ ಗ್ರಾಮ್ಗೆ 50 ಪೈಸೆ ಏರಿದೆ. ಬೆಂಗಳೂರಿನಲ್ಲಿ 10 ಪೈಸೆ ಏರಿಕೆ ಆಗಿದೆ. ಅಮೆರಿಕದಲ್ಲಿ ಬಡ್ಡಿದರ ಪರಿಷ್ಕರಣೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವವರೆಗೂ ಇದೇ ಸ್ಥಿತಿ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,740 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,260 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,610 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,740 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,500 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: 2024ರ ಫೆಬ್ರುವರಿಯಲ್ಲಿ ಭಾರತದ ಹಣದುಬ್ಬರ ಶೇ. 5.09; ಜನವರಿಯಲ್ಲಿ ಔದ್ಯಮಿಕ ಉತ್ಪಾದನೆ ಶೇ. 3.8 ಹೆಚ್ಚಳ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ