Gold Rate Today Bangalore: ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 March 17th: ಇಂದು ಸೋಮವಾರ ಚಿನ್ನದ ಬೆಲೆ ಗ್ರಾಮ್​​ಗೆ 10 ರೂನಷ್ಟು ಕಡಿಮೆ ಆಗಿದೆ. 8,220 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,210 ರೂಗೆ ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಅಪರಂಜಿ ಚಿನ್ನದ ಬೆಲೆ 8,956 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 103 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 112 ರೂ ಇದೆ.

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Mar 17, 2025 | 12:39 PM

ಬೆಂಗಳೂರು, ಮಾರ್ಚ್ 17: ಸತತ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ (Gold rates) ಅಲ್ಪ ಇಳಿಕೆಯೊಂದಿಗೆ ಈ ವಾರವನ್ನು ಆರಂಭಿಸಿದೆ. ಇಂದು ಈ ಹಳದಿ ಲೋಹದ ಬೆಲೆ ಗ್ರಾಮ್​​ಗೆ 10 ರೂನಷ್ಟು ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ ಇನ್ನೂ 8,200 ರೂ ಮಟ್ಟಕ್ಕಿಂತ ಮೇಲೆಯೇ ಇದೆ. 8,220 ರೂನಿಂದ 8,210 ರೂಗೆ ಅದು ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,956 ರೂಗೆ ಇಳಿಕೆ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಏರಿಕೆಯಾದರೆ ಇನ್ನೂ ಕೆಲವೆಡೆ ಬೆಲೆ ಇಳಿಕೆ ಆಗಿದೆ. ಚಿನ್ನದಂತೆ ಬೆಳ್ಳಿ ಬೆಲೆಗಳೂ ಕೂಡ ಕೆಲವೆಡೆ ಅಲ್ಪ ಇಳಿಕೆ ಆಗಿದೆ. ಕೆಲ ನಗರಗಳಲ್ಲಿ ಅದರ ಬೆಲೆ ಗ್ರಾಮ್​​ಗೆ 10 ಪೈಸೆಯಷ್ಟು ಮಾತ್ರ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 82,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 89,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 82,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,560 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,030 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,030 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 82,100 ರೂ
  • ಚೆನ್ನೈ: 82,100 ರೂ
  • ಮುಂಬೈ: 82,100 ರೂ
  • ದೆಹಲಿ: 82,250 ರೂ
  • ಕೋಲ್ಕತಾ: 82,100 ರೂ
  • ಕೇರಳ: 82,100 ರೂ
  • ಅಹ್ಮದಾಬಾದ್: 82,150 ರೂ
  • ಜೈಪುರ್: 82,250 ರೂ
  • ಲಕ್ನೋ: 82,250 ರೂ
  • ಭುವನೇಶ್ವರ್: 82,100 ರೂ

ಇದನ್ನೂ ಓದಿ: ಚಿನ್ನದ ಬೆಲೆ ಇಷ್ಟು ಕ್ಷಿಪ್ರವಾಗಿ ಏರುತ್ತಿರುವುದ್ಯಾಕೆ? ಇಳಿಕೆಯಾಗೋದು ಯಾವಾಗ?

ಇದನ್ನೂ ಓದಿ
ಚಿನ್ನದ ಬೆಲೆ ಇಳಿಕೆ ಯಾವಾಗ?
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ
ವಿಶ್ವದ ಶೇ. 11ರಷ್ಟು ಚಿನ್ನ ಭಾರತೀಯ ಹೆಂಗಸರ ಬಳಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,200 ರಿಂಗಿಟ್ (82,020 ರುಪಾಯಿ)
  • ದುಬೈ: 3,345 ಡಿರಾಮ್ (79,050 ರುಪಾಯಿ)
  • ಅಮೆರಿಕ: 905 ಡಾಲರ್ (78,560 ರುಪಾಯಿ)
  • ಸಿಂಗಾಪುರ: 1,243 ಸಿಂಗಾಪುರ್ ಡಾಲರ್ (80,880 ರುಪಾಯಿ)
  • ಕತಾರ್: 3,365 ಕತಾರಿ ರಿಯಾಲ್ (80,130 ರೂ)
  • ಸೌದಿ ಅರೇಬಿಯಾ: 3,400 ಸೌದಿ ರಿಯಾಲ್ (78,690 ರುಪಾಯಿ)
  • ಓಮನ್: 354.50 ಒಮಾನಿ ರಿಯಾಲ್ (79,990 ರುಪಾಯಿ)
  • ಕುವೇತ್: 273.70 ಕುವೇತಿ ದಿನಾರ್ (77,110 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,300 ರೂ
  • ಚೆನ್ನೈ: 11,200 ರೂ
  • ಮುಂಬೈ: 10,300 ರೂ
  • ದೆಹಲಿ: 10,300 ರೂ
  • ಕೋಲ್ಕತಾ: 10,300 ರೂ
  • ಕೇರಳ: 11,200 ರೂ
  • ಅಹ್ಮದಾಬಾದ್: 10,300 ರೂ
  • ಜೈಪುರ್: 10,300 ರೂ
  • ಲಕ್ನೋ: 10,300 ರೂ
  • ಭುವನೇಶ್ವರ್: 11,200 ರೂ
  • ಪುಣೆ: 10,300

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us