AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಭಾರತದಲ್ಲಿ ಚಿನ್ನದ ಬೆಲೆ ಹೊಸ ದಾಖಲೆ; ಅಮೆರಿಕದಲ್ಲಿ ಮೊದಲ ಬಾರಿಗೆ 100 ಡಾಲರ್ ಮುಟ್ಟಿದ ಬೆಲೆ

Bullion Market 2025 April 17th: ಚಿನ್ನದ ಬೆಲೆ ಹೊಸ ದಾಖಲೆ ಮಟ್ಟ ಮುಟ್ಟಿದೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​​ಗೆ 8,920 ರೂಗೆ ಏರಿದೆ. ಇದು ಸಾರ್ವಕಾಲಿಕ ಗರಿಷ್ಠ ಮಟ್ಟ ಎನಿಸಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​​ಗೆ 9,731 ರೂಗೆ ಏರಿದೆ. ಹೀಗೆ ಏರಿಕೆ ಮುಂದುವರಿದರೆ ಬೆಲೆ 10,000 ರೂ ಮುಟ್ಟಬಹುದು. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 100 ರೂನಲ್ಲಿ ಮುಂದುವರಿದಿದೆ. ಚಿನ್ನದ ಬೆಲೆಯಷ್ಟು ಏರಿಕೆ ಬೆಳ್ಳಿಯಲ್ಲಿ ಆಗುತ್ತಿಲ್ಲ.

Gold Rate Today Bangalore: ಭಾರತದಲ್ಲಿ ಚಿನ್ನದ ಬೆಲೆ ಹೊಸ ದಾಖಲೆ; ಅಮೆರಿಕದಲ್ಲಿ ಮೊದಲ ಬಾರಿಗೆ 100 ಡಾಲರ್ ಮುಟ್ಟಿದ ಬೆಲೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 17, 2025 | 10:29 AM

Share

ಬೆಂಗಳೂರು, ಏಪ್ರಿಲ್ 17: ಚಿನ್ನದ ಬೆಲೆ ಇವತ್ತೂ ಭಾರೀ ಪ್ರಮಾಣದಲ್ಲಿ ಏರಿಕೆ ಆಗಿದೆ. ನಿನ್ನೆ ಗ್ರಾಮ್​​ಗೆ 95 ರೂನಷ್ಟು ಏರಿದ್ದ ಚಿನ್ನದ ಬೆಲೆ (Gold rate today) ಇವತ್ತು ಗುರುವಾರ ಬರೋಬ್ಬರಿ 105 ರೂಗಳಷ್ಟು ಹೆಚ್ಚಳ ಕಂಡಿದೆ. ಎರಡು ದಿನದಲ್ಲಿ 200 ರೂನಷ್ಟು ಬೆಲೆ ಜಂಪ್ ಆಗಿದೆ. ಭಾರತ ಹಾಗೂ ಬಹುತೇಕ ಎಲ್ಲಾ ದೇಶಗಳಲ್ಲೂ ಸ್ವರ್ಣ ಬೆಲೆ ಸಿಕ್ಕಾಪಟ್ಟೆ ಏರಿದೆ. ಅಮೆರಿಕದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆ ಮೊದಲ ಬಾರಿಗೆ 100 ಡಾಲರ್ ಗಡಿ ದಾಟಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಏರಿಕೆ ಕಂಡಿಲ್ಲ. ಒಂದು ಗ್ರಾಮ್ ಬೆಳ್ಳಿ 100 ರೂ ಮತ್ತು 110 ರೂನಲ್ಲಿ ಬೆಲೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 89,200 ರೂ
  • ಚೆನ್ನೈ: 89,200 ರೂ
  • ಮುಂಬೈ: 89,200 ರೂ
  • ದೆಹಲಿ: 89,350 ರೂ
  • ಕೋಲ್ಕತಾ: 89,200 ರೂ
  • ಕೇರಳ: 89,200 ರೂ
  • ಅಹ್ಮದಾಬಾದ್: 89,250 ರೂ
  • ಜೈಪುರ್: 89,350 ರೂ
  • ಲಕ್ನೋ: 89,350 ರೂ
  • ಭುವನೇಶ್ವರ್: 89,200 ರೂ

ಇದನ್ನೂ ಓದಿ: ಧೋನಿ ಜೆರ್ಸಿ ಗಿಫ್ಟ್; ಮಾಸ್ಟರ್​​ಕಾರ್ಡ್​​ನಿಂದ ಸಿಎಸ್​​​ಕೆ ಕೋ-ಬ್ರ್ಯಾಂಡ್ ಕ್ರೆಡಿಟ್ ಕಾರ್ಡ್​​ಗಳ ಬಿಡುಗಡೆ

ಇದನ್ನೂ ಓದಿ
Image
ಒಡವೆ ಸಾಲಗಳಿಗೆ ಆರ್​​ಬಿಐ ನಿರ್ಬಂಧ? ಎನ್​​ಬಿಎಫ್​​ಸಿಗಳಿಗೆ ಫಜೀತಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,650 ರಿಂಗಿಟ್ (90,060 ರುಪಾಯಿ)
  • ದುಬೈ: 3,695 ಡಿರಾಮ್ (86,050 ರುಪಾಯಿ)
  • ಅಮೆರಿಕ: 1,000 ಡಾಲರ್ (85,540 ರುಪಾಯಿ)
  • ಸಿಂಗಾಪುರ: 1,363 ಸಿಂಗಾಪುರ್ ಡಾಲರ್ (88,760 ರುಪಾಯಿ)
  • ಕತಾರ್: 3,720 ಕತಾರಿ ರಿಯಾಲ್ (87,300 ರೂ)
  • ಸೌದಿ ಅರೇಬಿಯಾ: 3,780 ಸೌದಿ ರಿಯಾಲ್ (86,170 ರುಪಾಯಿ)
  • ಓಮನ್: 394 ಒಮಾನಿ ರಿಯಾಲ್ (87,540 ರುಪಾಯಿ)
  • ಕುವೇತ್: 303.80 ಕುವೇತಿ ದಿನಾರ್ (84,740 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 11,000 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 11,000 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 11,000 ರೂ
  • ಪುಣೆ: 10,000

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್