ಬೆಂಗಳೂರು, ಮಾರ್ಚ್ 18: ಭಾರತದಲ್ಲಿ ಚಿನ್ನದ ಬೆಲೆ (Gold and silver Rates) ಅಲ್ಪ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಬಹುತೇಕ ಯಥಾಸ್ಥಿತಿಯಲ್ಲಿದೆ. ಕೆಲ ದೇಶಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ಬೆಲೆ ಇಳಿಕೆ ಆಗಿದೆ. ಹಿಂದಿನ ಎರಡು ವಾರದಲ್ಲಿ ಒಂದು ವಾರ ಬಹಳ ದೊಡ್ಡ ಮಟ್ಟದಲ್ಲಿ ಚಿನ್ನದ ಬೆಲೆ ಏರಿಕೆ ಆಗಿತ್ತು. ಕಳೆದ ವಾರ ಬೆಲೆ ಸ್ವಲ್ಪಮಟ್ಟಿಗೆ ತಹಬದಿಗೆ ಬಂದಿದೆ. ಈ ವಾರ ಚಿನ್ನದ ಬೆಲೆ ಯಾವ ದಿಕ್ಕಿಗೆ ಹೋಗುತ್ತದೆ ನೋಡಬೇಕು. ಅಮೆರಿಕದಲ್ಲಿ ಫೆಡ್ ರಿಸರ್ವ್ ಬಡ್ಡಿದರ ಇದೇ ವಾರ ಘೋಷಿಸಲಿದೆ. ಇದರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲಾಗಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,590 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,100 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,730 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,590 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,610 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಕರ್ನಾಟಕದಲ್ಲಿ ಮದರ್ ಡೈರಿಯಿಂದ ಹಣ್ಣು ಸಂಸ್ಕರಣಾ ಘಟಕ; ಮಹಾರಾಷ್ಟ್ರದಲ್ಲಿ ಬೃಹತ್ ಡೈರಿ; ಒಟ್ಟು 750 ರೂ ಹೂಡಿಕೆ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ