AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Prices: ಬಹುತೇಕ ವಿದೇಶಗಳಲ್ಲಿ 50 ಸಾವಿರ ಗಡಿದಾಟಿದ ಚಿನ್ನದ ಬೆಲೆ; ಭಾರತದಲ್ಲಿ ಅಪರಂಜಿ ಚಿನ್ನ 60 ಸಾವಿರಕ್ಕೂ ಹೆಚ್ಚು; ಇವತ್ತಿನ ದರಗಳೆಷ್ಟು ನೋಡಿ

Bullion Market 2023, March 20th: ಚಿನ್ನದ ಬೆಲೆ (Gold Rates Hike) ಗಣನೀಯವಾಗಿ ಹೆಚ್ಚುತ್ತಾ ಬಂದಿದೆ. ಕಳೆದ ವಾರ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 3 ಸಾವಿರ ರುಪಾಯಿಗೂ ಹೆಚ್ಚು ಏರಿಕೆ ಕಂಡಿದೆ. ಇದೀಗ ಅದರ ಬೆಲೆ ಭಾರತದಲ್ಲಿ 55,300 ರುಪಾಯಿ ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Prices: ಬಹುತೇಕ ವಿದೇಶಗಳಲ್ಲಿ 50 ಸಾವಿರ ಗಡಿದಾಟಿದ ಚಿನ್ನದ ಬೆಲೆ; ಭಾರತದಲ್ಲಿ ಅಪರಂಜಿ ಚಿನ್ನ 60 ಸಾವಿರಕ್ಕೂ ಹೆಚ್ಚು; ಇವತ್ತಿನ ದರಗಳೆಷ್ಟು ನೋಡಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 20, 2023 | 5:00 AM

Share

ಬೆಂಗಳೂರು: ಭಾರತ ಹಾಗೂ ಇತರ ವಿದೇಶೀ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆ (Gold Rates Hike) ಗಣನೀಯವಾಗಿ ಹೆಚ್ಚುತ್ತಾ ಬಂದಿದೆ. ಕಳೆದ ವಾರ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 3 ಸಾವಿರ ರುಪಾಯಿಗೂ ಹೆಚ್ಚು ಏರಿಕೆ ಕಂಡಿದೆ. ಇದೀಗ ಅದರ ಬೆಲೆ ಭಾರತದಲ್ಲಿ 55,300 ರುಪಾಯಿ ಆಗಿದೆ. ಮುಂದಿನ ದಿನಗಳೂ ಬೆಲೆಗಳಲ್ಲಿ ಕ್ಷಿಪ್ರ ವ್ಯತ್ಯಯಗಳಾಗುವ ಸಾಧ್ಯತೆ ಇದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಗಡಿ ದಾಟಿ ಹೋಗಿದೆ. ಬೆಳ್ಳಿ ಬೆಲೆ ಚಿನ್ನದಷ್ಟಲ್ಲದಿದ್ದರೂ ತಕ್ಕಮಟ್ಟಿಗೆ ಏರಿಕೆ ಕಾಣುತ್ತಿದೆ. ಭಾರತದಲ್ಲಿ ಬೆಳ್ಳಿ ಬೆಲೆ 10 ಗ್ರಾಮ್​ಗೆ 721 ರುಪಾಯಿ ಆಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 55,350 ರುಪಾಯಿ ಆದರೆ, 100 ಗ್ರಾಮ್ ಬೆಳ್ಳಿ ಬೆಲೆ 7,440 ರುಪಾಯಿಗೆ ಏರಿಕೆಯಾಗಿದೆ.

ವಿದೇಶಗಳ ಚಿನಿವಾರಪೇಟೆಗಳಲ್ಲಿಯೂ (Bullion Market) ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ. ಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅರಬ್ ದೇಶಗಳು, ಅಮೆರಿಕ, ಸಿಂಗಾಪುರ, ಮಲೇಷ್ಯಾ ದೇಶಗಳಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಅಮೆರಿಕದಲ್ಲಿ ನಾಲ್ಕೈದಿನ ತಟಸ್ಥವಾಗಿದ್ದ ಚಿನ್ನದ ಬೆಲೆ ಮೊನ್ನೆ ತುಸು ಹೆಚ್ಚಿದೆ. ಈಗ ಬಹುತೇಕ ಎಲ್ಲಾ ವಿದೇಶಗಳಲ್ಲೂ ಚಿನ್ನದ ಬೆಲೆ ಭಾರತೀಯ ರುಪಾಯಿ ಲೆಕ್ಕದಲ್ಲಿ 50 ಸಾವಿರ ರೂ ಗಡಿ ದಾಟಿದೆ. ಮಲೇಷ್ಯಾ, ಕತಾರ್ ಮತ್ತು ಓಮನ್​ನಲ್ಲಿ ಚಿನ್ನದ ಬೆಲೆ 52 ಸಾವಿರ ರೂಗಿಂತ ಹೆಚ್ಚಿದೆ.

ಚಿನ್ನದ ಬೆಲೆ ಏರಿಕೆಗೆ ಏನು ಕಾರಣ?

ಅಮೆರಿಕದ ಆರ್ಥಿಕತೆಯ ತುಮುಲ, ನಿರುದ್ಯೋಗ ಅಂಕಿ ಅಂಶದ ಗೊಂದಲ, ಹಣದುಬ್ಬರ ಅನಿಶ್ಚಿತತೆ, ಬಡ್ಡಿ ದರ ಬಗ್ಗೆ ಅಸ್ಪಷ್ಟತೆ, ಡಾಲರ್ ದುರ್ಬಲಗೊಂಡಿರುವುದು ಇವೆಲ್ಲವೂ ಹೂಡಿಕೆದಾರರನ್ನು ಚಿನ್ನದತ್ತ ಗಮನ ಕೊಡುವಂತೆ ಮಾಡಿವೆ. ಹೀಗಾಗಿ, ಚಿನ್ನಕ್ಕೆ ಬೇಡಿಕೆ ಹೆಚ್ಚಿ ಬೆಲೆ ಕೂಡ ಹೆಚ್ಚುತ್ತಿದೆ. ತಜ್ಞರ ಪ್ರಕಾರ ಇನ್ನೂ ಬಹಳಷ್ಟು ದಿನ ಚಿನ್ನದ ಬೆಲೆ ಏರಿಕೆಯ ಟ್ರೆಂಡ್ ಮುಂದುವರಿಯಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲು ಈಗಲೂ ಪ್ರಶಸ್ತ ಸಮಯ ಇದೆ ಎಂಬ ಸಲಹೆಯನ್ನು ಕೊಡಲಾಗಿದೆ.

ಇದನ್ನೂ ಓದಿಅಬ್ಬಬ್ಬಾ..! ಈ ಬ್ಯಾಂಕ್​ನ ಎಫ್​ಡಿಗಳಿಗೆ ಸಿಗುತ್ತದೆ ಬರೋಬ್ಬರಿ ಶೇ. 9.50 ರವರೆಗೆ ಬಡ್ಡಿ; ಇದರ ಮುಂದೆ ಯಾವ ಸ್ಕೀಮೂ ಡಮ್ಮಿ

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 20ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,300 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,320 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 721 ರೂ

ಬೆಂಗಳೂರಿನಲ್ಲಿರುವ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,350 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,370 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 744 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,350 ರೂ
  • ಚೆನ್ನೈ: 55,600 ರೂ
  • ಮುಂಬೈ: 55,300 ರೂ
  • ದೆಹಲಿ: 55,450 ರೂ
  • ಕೋಲ್ಕತಾ: 55,300 ರೂ
  • ಕೇರಳ: 55,300 ರೂ
  • ಅಹ್ಮದಾಬಾದ್: 55,350 ರೂ
  • ಜೈಪುರ್: 55,450 ರೂ
  • ಲಕ್ನೋ: 55,450 ರೂ
  • ಭುವನೇಶ್ವರ್: 55,300 ರೂ

ಇದನ್ನೂ ಓದಿEconomic Crisis: ಫೋರೆಕ್ಸ್ ರಿಸರ್ವ್ ಮತ್ತೆ ಕುಸಿತ; ವಿನಾಶದತ್ತ ಆರ್ಥಿಕತೆ- ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (52,444 ರುಪಾಯಿ)
  • ದುಬೈ: 2230 ಡಿರಾಮ್ (50,114 ರುಪಾಯಿ)
  • ಅಮೆರಿಕ: 610 ಡಾಲರ್ (50,349 ರುಪಾಯಿ)
  • ಸಿಂಗಾಪುರ: 830 ಸಿಂಗಾಪುರ್ ಡಾಲರ್ (51,068 ರುಪಾಯಿ)
  • ಕತಾರ್: 2,295 ಕತಾರಿ ರಿಯಾಲ್ (52,027 ರೂ)
  • ಓಮನ್: 243 ಒಮಾನಿ ರಿಯಾಲ್ (52,099 ರುಪಾಯಿ)
  • ಕುವೇತ್: 189.50 ಕುವೇತಿ ದಿನಾರ್ (50,972 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,440 ರೂ
  • ಚೆನ್ನೈ: 7,440 ರೂ
  • ಮುಂಬೈ: 7,210 ರೂ
  • ದೆಹಲಿ: 7,210 ರೂ
  • ಕೋಲ್ಕತಾ: 7,210 ರೂ
  • ಕೇರಳ: 7,440 ರೂ
  • ಅಹ್ಮದಾಬಾದ್: 7,210 ರೂ
  • ಜೈಪುರ್: 7,210 ರೂ
  • ಲಕ್ನೋ: 7,210 ರೂ
  • ಭುವನೇಶ್ವರ್: 7,440 ರೂ

ಇನ್ನಷ್ಟು ವ್ಯವಹಾರಗಳ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ