ಬೆಂಗಳೂರು: ಭಾರತ ಹಾಗೂ ಇತರ ವಿದೇಶೀ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆ (Gold Rates Hike) ಗಣನೀಯವಾಗಿ ಹೆಚ್ಚುತ್ತಾ ಬಂದಿದೆ. ಕಳೆದ ವಾರ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 3 ಸಾವಿರ ರುಪಾಯಿಗೂ ಹೆಚ್ಚು ಏರಿಕೆ ಕಂಡಿದೆ. ಇದೀಗ ಅದರ ಬೆಲೆ ಭಾರತದಲ್ಲಿ 55,300 ರುಪಾಯಿ ಆಗಿದೆ. ಮುಂದಿನ ದಿನಗಳೂ ಬೆಲೆಗಳಲ್ಲಿ ಕ್ಷಿಪ್ರ ವ್ಯತ್ಯಯಗಳಾಗುವ ಸಾಧ್ಯತೆ ಇದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಗಡಿ ದಾಟಿ ಹೋಗಿದೆ. ಬೆಳ್ಳಿ ಬೆಲೆ ಚಿನ್ನದಷ್ಟಲ್ಲದಿದ್ದರೂ ತಕ್ಕಮಟ್ಟಿಗೆ ಏರಿಕೆ ಕಾಣುತ್ತಿದೆ. ಭಾರತದಲ್ಲಿ ಬೆಳ್ಳಿ ಬೆಲೆ 10 ಗ್ರಾಮ್ಗೆ 721 ರುಪಾಯಿ ಆಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 55,350 ರುಪಾಯಿ ಆದರೆ, 100 ಗ್ರಾಮ್ ಬೆಳ್ಳಿ ಬೆಲೆ 7,440 ರುಪಾಯಿಗೆ ಏರಿಕೆಯಾಗಿದೆ.
ವಿದೇಶಗಳ ಚಿನಿವಾರಪೇಟೆಗಳಲ್ಲಿಯೂ (Bullion Market) ಚಿನ್ನದ ಬೆಲೆ ಏರಿಕೆ ಕಾಣುತ್ತಿದೆ. ಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅರಬ್ ದೇಶಗಳು, ಅಮೆರಿಕ, ಸಿಂಗಾಪುರ, ಮಲೇಷ್ಯಾ ದೇಶಗಳಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಅಮೆರಿಕದಲ್ಲಿ ನಾಲ್ಕೈದಿನ ತಟಸ್ಥವಾಗಿದ್ದ ಚಿನ್ನದ ಬೆಲೆ ಮೊನ್ನೆ ತುಸು ಹೆಚ್ಚಿದೆ. ಈಗ ಬಹುತೇಕ ಎಲ್ಲಾ ವಿದೇಶಗಳಲ್ಲೂ ಚಿನ್ನದ ಬೆಲೆ ಭಾರತೀಯ ರುಪಾಯಿ ಲೆಕ್ಕದಲ್ಲಿ 50 ಸಾವಿರ ರೂ ಗಡಿ ದಾಟಿದೆ. ಮಲೇಷ್ಯಾ, ಕತಾರ್ ಮತ್ತು ಓಮನ್ನಲ್ಲಿ ಚಿನ್ನದ ಬೆಲೆ 52 ಸಾವಿರ ರೂಗಿಂತ ಹೆಚ್ಚಿದೆ.
ಅಮೆರಿಕದ ಆರ್ಥಿಕತೆಯ ತುಮುಲ, ನಿರುದ್ಯೋಗ ಅಂಕಿ ಅಂಶದ ಗೊಂದಲ, ಹಣದುಬ್ಬರ ಅನಿಶ್ಚಿತತೆ, ಬಡ್ಡಿ ದರ ಬಗ್ಗೆ ಅಸ್ಪಷ್ಟತೆ, ಡಾಲರ್ ದುರ್ಬಲಗೊಂಡಿರುವುದು ಇವೆಲ್ಲವೂ ಹೂಡಿಕೆದಾರರನ್ನು ಚಿನ್ನದತ್ತ ಗಮನ ಕೊಡುವಂತೆ ಮಾಡಿವೆ. ಹೀಗಾಗಿ, ಚಿನ್ನಕ್ಕೆ ಬೇಡಿಕೆ ಹೆಚ್ಚಿ ಬೆಲೆ ಕೂಡ ಹೆಚ್ಚುತ್ತಿದೆ. ತಜ್ಞರ ಪ್ರಕಾರ ಇನ್ನೂ ಬಹಳಷ್ಟು ದಿನ ಚಿನ್ನದ ಬೆಲೆ ಏರಿಕೆಯ ಟ್ರೆಂಡ್ ಮುಂದುವರಿಯಬಹುದು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲು ಈಗಲೂ ಪ್ರಶಸ್ತ ಸಮಯ ಇದೆ ಎಂಬ ಸಲಹೆಯನ್ನು ಕೊಡಲಾಗಿದೆ.
ಇದನ್ನೂ ಓದಿ: ಅಬ್ಬಬ್ಬಾ..! ಈ ಬ್ಯಾಂಕ್ನ ಎಫ್ಡಿಗಳಿಗೆ ಸಿಗುತ್ತದೆ ಬರೋಬ್ಬರಿ ಶೇ. 9.50 ರವರೆಗೆ ಬಡ್ಡಿ; ಇದರ ಮುಂದೆ ಯಾವ ಸ್ಕೀಮೂ ಡಮ್ಮಿ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,300 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,320 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 721 ರೂ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 55,350 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,370 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 744 ರೂ
ಇದನ್ನೂ ಓದಿ: Economic Crisis: ಫೋರೆಕ್ಸ್ ರಿಸರ್ವ್ ಮತ್ತೆ ಕುಸಿತ; ವಿನಾಶದತ್ತ ಆರ್ಥಿಕತೆ- ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ
ಇನ್ನಷ್ಟು ವ್ಯವಹಾರಗಳ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ