AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 20th March: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 March 20th: ಇಂದು ಬುಧವಾರದಂದು ಚಿನ್ನದ ಬೆಲೆ ಗ್ರಾಮ್​ಗೆ 42 ರೂ, ಬೆಳ್ಳಿ ಬೆಲೆ ಗ್ರಾಮ್​ಗೆ 30 ಪೈಸೆ ಹೆಚ್ಚಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,330 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.30 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 60,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,590 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 20th March: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಹೆಚ್ಚಳ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
| Edited By: ವಿವೇಕ ಬಿರಾದಾರ|

Updated on:Mar 20, 2024 | 6:23 AM

Share

ಬೆಂಗಳೂರು, ಮಾರ್ಚ್ 20: ಕಳೆದ ಒಂದು ವಾರದಿಂದ ಬಹುತೇಕ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇವತ್ತು ಭರ್ಜರಿ ಹೆಚ್ಚಳವಾಗಿದೆ. ಬುಧವಾರ ಒಂದೆ ದಿನ ಚಿನ್ನದ ಬೆಲೆ ಗ್ರಾಮ್​ಗೆ 42 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ 30 ಪೈಸೆ ಜಾಸ್ತಿಯಾಗಿದೆ. ಇವತ್ತು ಅಮೆರಿಕದಲ್ಲಿ ಬಡ್ಡಿದರ ಪರಿಷ್ಕರಣೆಯನ್ನು ಘೋಷಿಸುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆಯಾಗಿ ಹೂಡಿಕೆದಾರರು ಚಿನ್ನವನ್ನು ಹಿಡಿದಿಟ್ಟುಕೊಳ್ಳುತ್ತಿರುವಂತೆ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,730 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,590 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 773 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,300 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 759 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 60,800 ರೂ
  • ಚೆನ್ನೈ: 61,380 ರೂ
  • ಮುಂಬೈ: 60,800 ರೂ
  • ದೆಹಲಿ: 60,950 ರೂ
  • ಕೋಲ್ಕತಾ: 60,800 ರೂ
  • ಕೇರಳ: 60,800 ರೂ
  • ಅಹ್ಮದಾಬಾದ್: 60,850 ರೂ
  • ಜೈಪುರ್: 60,950 ರೂ
  • ಲಕ್ನೋ: 60,950 ರೂ
  • ಭುವನೇಶ್ವರ್: 60,800 ರೂ

ಇದನ್ನೂ ಓದಿ: ಬೆಂಗಳೂರಿನ ಉಜ್ಜೀವನ್ ಬ್ಯಾಂಕ್​ನಲ್ಲಿ ಎಫ್​ಡಿಗೆ ಬಡ್ಡಿದರ ಬರೋಬ್ಬರಿ ಶೇ. 9; ಉಳಿತಾಯ ಹಣದ ಹೂಡಿಕೆಗೆ ಒಳ್ಳೆಯ ಪ್ಲಾನ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,250 ರಿಂಗಿಟ್ (56,988 ರುಪಾಯಿ)
  • ದುಬೈ: 2,422.50 ಡಿರಾಮ್ (54,742 ರುಪಾಯಿ)
  • ಅಮೆರಿಕ: 660 ಡಾಲರ್ (54,772 ರುಪಾಯಿ)
  • ಸಿಂಗಾಪುರ: 900 ಸಿಂಗಾಪುರ್ ಡಾಲರ್ (55,624 ರುಪಾಯಿ)
  • ಕತಾರ್: 2,475 ಕತಾರಿ ರಿಯಾಲ್ (56,319 ರೂ)
  • ಸೌದಿ ಅರೇಬಿಯಾ: 2,480 ಸೌದಿ ರಿಯಾಲ್ (54,877 ರುಪಾಯಿ)
  • ಓಮನ್: 262.50 ಒಮಾನಿ ರಿಯಾಲ್ (56,585 ರುಪಾಯಿ)
  • ಕುವೇತ್: 205 ಕುವೇತಿ ದಿನಾರ್ (55,325 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,590 ರೂ
  • ಚೆನ್ನೈ: 8,030 ರೂ
  • ಮುಂಬೈ: 7,730 ರೂ
  • ದೆಹಲಿ: 7,730 ರೂ
  • ಕೋಲ್ಕತಾ: 7,730 ರೂ
  • ಕೇರಳ: 8,030 ರೂ
  • ಅಹ್ಮದಾಬಾದ್: 7,730 ರೂ
  • ಜೈಪುರ್: 7,730 ರೂ
  • ಲಕ್ನೋ: 7,730 ರೂ
  • ಭುವನೇಶ್ವರ್: 8,030 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Wed, 20 March 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ