
ಬೆಂಗಳೂರು, ಮಾರ್ಚ್ 20: ಕಳೆದ ಒಂದು ವಾರದಿಂದ ಬಹುತೇಕ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇವತ್ತು ಭರ್ಜರಿ ಹೆಚ್ಚಳವಾಗಿದೆ. ಬುಧವಾರ ಒಂದೆ ದಿನ ಚಿನ್ನದ ಬೆಲೆ ಗ್ರಾಮ್ಗೆ 42 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ 30 ಪೈಸೆ ಜಾಸ್ತಿಯಾಗಿದೆ. ಇವತ್ತು ಅಮೆರಿಕದಲ್ಲಿ ಬಡ್ಡಿದರ ಪರಿಷ್ಕರಣೆಯನ್ನು ಘೋಷಿಸುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆಯಾಗಿ ಹೂಡಿಕೆದಾರರು ಚಿನ್ನವನ್ನು ಹಿಡಿದಿಟ್ಟುಕೊಳ್ಳುತ್ತಿರುವಂತೆ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,730 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,590 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಬೆಂಗಳೂರಿನ ಉಜ್ಜೀವನ್ ಬ್ಯಾಂಕ್ನಲ್ಲಿ ಎಫ್ಡಿಗೆ ಬಡ್ಡಿದರ ಬರೋಬ್ಬರಿ ಶೇ. 9; ಉಳಿತಾಯ ಹಣದ ಹೂಡಿಕೆಗೆ ಒಳ್ಳೆಯ ಪ್ಲಾನ್
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 5:00 am, Wed, 20 March 24