AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಮತ್ತೆ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 March 20th: ಹಳದಿ ಲೋಹಕ್ಕೆ ಬೇಡಿಕೆ ಕಡಿಮೆ ಆಗುತ್ತಿಲ್ಲ. ಇಂದು ಗುರುವಾರವೂ ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ಅಪರಂಜಿ ಚಿನ್ನದ ಬೆಲೆ ದೆಹಲಿ ಮೊದಲಾದ ಕೆಲವೆಡೆ ದಾಖಲೆಯ 9,100 ರೂ ಮೈಲಿಗಲ್ಲು ಮುಟ್ಟುವತ್ತ ಸಾಗುತ್ತಿದೆ. ಬೆಳ್ಳಿ ಬೆಲೆ 105 ರೂ ಹಾಗೂ 114 ರೂನಲ್ಲಿ ಮುಂದುವರಿದಿದೆ.

Gold Rate Today Bangalore: ಚಿನ್ನದ ಬೆಲೆ ಮತ್ತೆ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 20, 2025 | 11:40 AM

Share

ಬೆಂಗಳೂರು, ಮಾರ್ಚ್ 20: ಚಿನ್ನದ ಬೆಲೆಯ (Gold rates) ಏರಿಕೆಯ ಓಟ ಮುಂದುವರಿಯುತ್ತಲೇ ಇದೆ. ಇವತ್ತು ಗುರುವಾರ ಚಿನ್ನದ ಬೆಲೆ ಗ್ರಾಮ್​​ಗೆ 20 ರೂನಷ್ಟು ಏರಿಕೆ ಆಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 22 ರೂನಷ್ಟು ಹೆಚ್ಚಿದೆ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 8,300 ರೂ ಗಡಿ ದಾಟಿ ಹೋಗಿದೆ. ದೆಹಲಿಯಲ್ಲಿ ಚಿನ್ನದ ಬೆಲೆ 8,305 ರೂನಿಂದ 8,325 ರೂಗೆ ಏರಿದೆ. ವಿದೇಶಗಳಲ್ಲಿ ಇಂದು ಕೆಲವೆಡೆ ಚಿನ್ನದ ಬೆಲೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 83,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 90,660 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 83,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,660 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,991 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 83,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,660 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,050 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 83,100 ರೂ
  • ಚೆನ್ನೈ: 83,100 ರೂ
  • ಮುಂಬೈ: 83,100 ರೂ
  • ದೆಹಲಿ: 83,250 ರೂ
  • ಕೋಲ್ಕತಾ: 83,100 ರೂ
  • ಕೇರಳ: 83,100 ರೂ
  • ಅಹ್ಮದಾಬಾದ್: 83,150 ರೂ
  • ಜೈಪುರ್: 83,250 ರೂ
  • ಲಕ್ನೋ: 83,250 ರೂ
  • ಭುವನೇಶ್ವರ್: 83,100 ರೂ

ಇದನ್ನೂ ಓದಿ: ಅಮೆರಿಕದಲ್ಲಿ ಬಡ್ಡಿದರ ಯಥಾಸ್ಥಿತಿ; 2025ರೊಳಗೆ 50 ಮೂಲಾಂಕಗಳಷ್ಟು ದರ ಕಡಿತಕ್ಕೆ ಇಂಗಿತ

ಇದನ್ನೂ ಓದಿ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
Image
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ
Image
ವಿಶ್ವದ ಶೇ. 11ರಷ್ಟು ಚಿನ್ನ ಭಾರತೀಯ ಹೆಂಗಸರ ಬಳಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,260 ರಿಂಗಿಟ್ (83,000 ರುಪಾಯಿ)
  • ದುಬೈ: 3,382.50 ಡಿರಾಮ್ (79,400 ರುಪಾಯಿ)
  • ಅಮೆರಿಕ: 920 ಡಾಲರ್ (79,360 ರುಪಾಯಿ)
  • ಸಿಂಗಾಪುರ: 1,265 ಸಿಂಗಾಪುರ್ ಡಾಲರ್ (81,930 ರುಪಾಯಿ)
  • ಕತಾರ್: 3,415 ಕತಾರಿ ರಿಯಾಲ್ (80,800 ರೂ)
  • ಸೌದಿ ಅರೇಬಿಯಾ: 3,460 ಸೌದಿ ರಿಯಾಲ್ (79,570 ರುಪಾಯಿ)
  • ಓಮನ್: 362.50 ಒಮಾನಿ ರಿಯಾಲ್ (81,220 ರುಪಾಯಿ)
  • ಕುವೇತ್: 277.80 ಕುವೇತಿ ದಿನಾರ್ (77,840 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,500 ರೂ
  • ಚೆನ್ನೈ: 11,400 ರೂ
  • ಮುಂಬೈ: 10,500 ರೂ
  • ದೆಹಲಿ: 10,500 ರೂ
  • ಕೋಲ್ಕತಾ: 10,500 ರೂ
  • ಕೇರಳ: 11,400 ರೂ
  • ಅಹ್ಮದಾಬಾದ್: 10,500 ರೂ
  • ಜೈಪುರ್: 10,500 ರೂ
  • ಲಕ್ನೋ: 10,500 ರೂ
  • ಭುವನೇಶ್ವರ್: 11,400 ರೂ
  • ಪುಣೆ: 10,500

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ