Gold Silver Price on 21st March: ಬೆಳ್ಳಿ ಬೆಲೆ ಇಳಿಕೆ, ಚಿನ್ನ ಕೆಲವೆಡೆ ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 March 21st: ಚಿನ್ನದ ಬೆಲೆ ಭಾರತದಲ್ಲಿ ಬಹುತೇಕ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,330 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 60,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 21st March: ಬೆಳ್ಳಿ ಬೆಲೆ ಇಳಿಕೆ, ಚಿನ್ನ ಕೆಲವೆಡೆ ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Mar 21, 2024 | 4:00 AM

ಬೆಂಗಳೂರು, ಮಾರ್ಚ್ 21: ಬೆಳ್ಳಿ ಬೆಲೆ (Gold and silver Rates) ಇಂದು ಗುರುವಾರ ತುಸು ಇಳಿಕೆಯಾಗಿದೆ. ಚಿನ್ನದ ಬೆಲೆ ಕೆಲವೆಡೆ ಸ್ವಲ್ಪ ಕಡಿಮೆ ಆಗಿದೆ. ಉಳಿದ ಕಡೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 60,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 66,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 60,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,300 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 60,800 ರೂ
  • ಚೆನ್ನೈ: 61,400 ರೂ
  • ಮುಂಬೈ: 60,800 ರೂ
  • ದೆಹಲಿ: 60,950 ರೂ
  • ಕೋಲ್ಕತಾ: 60,800 ರೂ
  • ಕೇರಳ: 60,800 ರೂ
  • ಅಹ್ಮದಾಬಾದ್: 60,850 ರೂ
  • ಜೈಪುರ್: 60,950 ರೂ
  • ಲಕ್ನೋ: 60,950 ರೂ
  • ಭುವನೇಶ್ವರ್: 60,800 ರೂ

ಇದನ್ನೂ ಓದಿ: ಚಿನ್ನದ ಬೆಲೆ ಈ ಸೆಪ್ಟಂಬರ್​ನೊಳಗೆ 70,000 ರೂ ಆಗುತ್ತಾ? ಈ ಏರಿಕೆಗೆ ಸಂಭಾವ್ಯ ಕಾರಣಗಳಿವು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,250 ರಿಂಗಿಟ್ (57,032 ರುಪಾಯಿ)
  • ದುಬೈ: 2,415 ಡಿರಾಮ್ (54,684 ರುಪಾಯಿ)
  • ಅಮೆರಿಕ: 660 ಡಾಲರ್ (54,887 ರುಪಾಯಿ)
  • ಸಿಂಗಾಪುರ: 901 ಸಿಂಗಾಪುರ್ ಡಾಲರ್ (55,724 ರುಪಾಯಿ)
  • ಕತಾರ್: 2,475 ಕತಾರಿ ರಿಯಾಲ್ (56,437 ರೂ)
  • ಸೌದಿ ಅರೇಬಿಯಾ: 2,480 ಸೌದಿ ರಿಯಾಲ್ (54,933 ರುಪಾಯಿ)
  • ಓಮನ್: 262 ಒಮಾನಿ ರಿಯಾಲ್ (56,591 ರುಪಾಯಿ)
  • ಕುವೇತ್: 205 ಕುವೇತಿ ದಿನಾರ್ (55,427 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,550 ರೂ
  • ಚೆನ್ನೈ: 8,000 ರೂ
  • ಮುಂಬೈ: 7,700 ರೂ
  • ದೆಹಲಿ: 7,700 ರೂ
  • ಕೋಲ್ಕತಾ: 7,700 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,700 ರೂ
  • ಜೈಪುರ್: 7,700 ರೂ
  • ಲಕ್ನೋ: 7,700 ರೂ
  • ಭುವನೇಶ್ವರ್: 8,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us