ಬೆಂಗಳೂರು, ಮಾರ್ಚ್ 24: ಅಮೆರಿಕದ ಫೆಡರಲ್ ರಿಸರ್ವ್ ಸಭೆ ಬಳಿಕ ಭರ್ಜರಿಯಾಗಿ ಏರಿ ನಂತರ ಸ್ವಲ್ಪ ಕಡಿಮೆ ಆಗಿದ್ದ ಚಿನ್ನದ ಬೆಲೆ (Gold and silver Rates) ವಾರಾಂತ್ಯದಲ್ಲೂ ತುಸು ಕಡಿಮೆ ಆಗಿದೆ. ಮಾರ್ಚ್ 21ರಂದು ಚಿನ್ನದ ಬೆಲೆ ಗ್ರಾಮ್ಗೆ ಭರ್ಜರಿ 100 ರೂನಷ್ಟು ಏರಿತ್ತು. ಬಳಿಕ ಗ್ರಾಮ್ಗೆ 35 ರೂನಷ್ಟು ಕಡಿಮೆ ಆಗಿತ್ತು. ಮಲೇಷ್ಯಾ, ಕುವೇತ್ ಮೊದಲಾದೆಡೆ ಬೆಲೆ ತುಸು ಹೆಚ್ಚಳವಾದರೆ, ಇನ್ನೂ ಹಲವೆಡೆ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 61,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 61,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,610 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಕಮಿಷನ್ ಆಸೆಗೆ ಬಿದ್ದು ಯಾರಾರಿಗೋ ಹಣ ವರ್ಗಾವಣೆ ಮಾಡದಿರಿ ಹುಷಾರ್..!
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 5:00 am, Sun, 24 March 24