AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಸೋಮವಾರವೂ ಇಳಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2025 March 24th: ಇಂದು ಸೋಮವಾರ ಚಿನ್ನದ ಗ್ರಾಮ್​​ಗೆ 15 ರೂನಷ್ಟು ಕಡಿಮೆ ಆಗಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆ ಸತತವಾಗಿ ಇಳಿಯುತ್ತಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 8,962 ರೂ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,215 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 101 ರೂ ಇದೆ. ಚೆನ್ನೈ ಮೊದಲಾದೆಡೆ ಒಂದು ಗ್ರಾಂ ಬೆಳ್ಳಿ ಬೆಲೆ 110 ರೂನಲ್ಲಿದೆ.

Gold Rate Today Bangalore: ಚಿನ್ನದ ಬೆಲೆ ಸೋಮವಾರವೂ ಇಳಿಕೆ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 24, 2025 | 10:13 AM

Share

ಬೆಂಗಳೂರು, ಮಾರ್ಚ್ 24: ಚಿನ್ನದ ಬೆಲೆ ಇಳಿಕೆ ಈ ವಾರವೂ ಮುಂದುವರಿಯುತ್ತಿರುವಂತಿದೆ. ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ (Gold Rates) ಅಲ್ಪ ಇಳಿಕೆ ಆಗಿದೆ. 8,230 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,215 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,962 ರೂಗೆ ಇಳಿದಿದೆ. ವಿದೇಶಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರುಪೇರಾಗಿಲ್ಲ. ಭಾರತದಲ್ಲಿ ಮಾತ್ರ ತುಸು ಬೆಲೆ ತಗ್ಗಿರುವುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 82,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 89,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 82,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,620 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 82,150 ರೂ
  • ಚೆನ್ನೈ: 82,150 ರೂ
  • ಮುಂಬೈ: 82,150 ರೂ
  • ದೆಹಲಿ: 82,300 ರೂ
  • ಕೋಲ್ಕತಾ: 82,150 ರೂ
  • ಕೇರಳ: 82,150 ರೂ
  • ಅಹ್ಮದಾಬಾದ್: 82,200 ರೂ
  • ಜೈಪುರ್: 82,300 ರೂ
  • ಲಕ್ನೋ: 82,300 ರೂ
  • ಭುವನೇಶ್ವರ್: 82,150 ರೂ

ಇದನ್ನೂ ಓದಿ: ಚೀನಾದಲ್ಲಿ ಒಂದಿಡೀ ನಗರದಷ್ಟು ಬೃಹತ್ ಮೆಗಾಫ್ಯಾಕ್ಟರಿ; ಘೋಸ್ಟ್ ಸಿಟಿಯಾಗುತ್ತಾ ಈ ಕಾರ್ಖಾನೆ?

ಇದನ್ನೂ ಓದಿ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
Image
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ
Image
ವಿಶ್ವದ ಶೇ. 11ರಷ್ಟು ಚಿನ್ನ ಭಾರತೀಯ ಹೆಂಗಸರ ಬಳಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,230 ರಿಂಗಿಟ್ (81,970 ರುಪಾಯಿ)
  • ದುಬೈ: 3,375 ಡಿರಾಮ್ (78,940 ರುಪಾಯಿ)
  • ಅಮೆರಿಕ: 915 ಡಾಲರ್ (78,600 ರುಪಾಯಿ)
  • ಸಿಂಗಾಪುರ: 1,258 ಸಿಂಗಾಪುರ್ ಡಾಲರ್ (80,870 ರುಪಾಯಿ)
  • ಕತಾರ್: 3,410 ಕತಾರಿ ರಿಯಾಲ್ (80,350 ರೂ)
  • ಸೌದಿ ಅರೇಬಿಯಾ: 3,450 ಸೌದಿ ರಿಯಾಲ್ (79,010 ರುಪಾಯಿ)
  • ಓಮನ್: 359 ಒಮಾನಿ ರಿಯಾಲ್ (80,130 ರುಪಾಯಿ)
  • ಕುವೇತ್: 277.20 ಕುವೇತಿ ದಿನಾರ್ (77,310 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,100 ರೂ
  • ಚೆನ್ನೈ: 11,000 ರೂ
  • ಮುಂಬೈ: 10,100 ರೂ
  • ದೆಹಲಿ: 10,100 ರೂ
  • ಕೋಲ್ಕತಾ: 10,100 ರೂ
  • ಕೇರಳ: 11,000 ರೂ
  • ಅಹ್ಮದಾಬಾದ್: 10,100 ರೂ
  • ಜೈಪುರ್: 10,100 ರೂ
  • ಲಕ್ನೋ: 10,100 ರೂ
  • ಭುವನೇಶ್ವರ್: 11,000 ರೂ
  • ಪುಣೆ: 10,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ