ಬೆಂಗಳೂರು, ಮಾರ್ಚ್ 27: ಎರಡು ಮೂರು ವಾರ ಕಾಲ ಸಾಕಷ್ಟು ಅಲುಗಾಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಕಳೆದ ಕೆಲ ದಿನಗಳಿಂದ ತಹಬದಿಗೆ ಬಂದಿವೆ. ಇಂದು ಬುಧವಾರ ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 30 ಪೈಸೆ ತಗ್ಗಿದೆ. ಫೆಡರಲ್ ರಿಸರ್ವ್ ನೀತಿ ಘೋಷಣೆಗೆ ಮುನ್ನ ವಿಪರೀತ ವ್ಯತ್ಯಯ ಕಂಡಿದ್ದ ಚಿನ್ನದ ಬೆಲೆ ಈಗ ಕೋರ್ಸ್ ಕರೆಕ್ಷನ್ ಹಾದಿಯಲ್ಲಿದೆ. ಆದರೂ ಕೂಡ ಬಹಳಷ್ಟು ಹೂಡಿಕೆದಾರರಿಗೆ ಸುರಕ್ಷಿತ ಹೂಡಿಕೆಯಾಗಿ ಚಿನ್ನ ಪ್ರಧಾನವಾಗಿದೆ. ಹೀಗಾಗಿ, ಅದರ ಬೆಲೆ ತುಸು ಹೆಚ್ಚಿನ ಮಟ್ಟದಲ್ಲೇ ಇರಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 61,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 61,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,650 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಚೀನಾದ ಯಾವುದೇ ನಗರಕ್ಕಿಂತಲೂ ಮುಂಬೈನಲ್ಲಿ ಅತಿಹೆಚ್ಚು ಬಿಲಿಯನೇರ್ಗಳು; ಜಾಗತಿಕವಾಗಿ ಮುಂಬೈಗೆ ಮೂರನೇ ಸ್ಥಾನ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ