Gold Rate Today Bangalore: ಚಿನ್ನದ ಬೆಲೆ ಗುರುವಾರವೂ ಏರಿಕೆ; ಇಲ್ಲಿದೆ ದರಪಟ್ಟಿ

Bullion Market 2025 March 27th: ಚಿನ್ನದ ಬೆಲೆ ಗುರುವಾರವೂ ಹೆಚ್ಚಳವಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 8,195 ರೂನಿಂದ 8,235 ರೂಗೆ ಏರಿದೆ. ಡೊನಾಲ್ಡ್ ಟ್ರಂಪ್ ಅವರ ಸರ್ಕಾರದಿಂದ ಸುಂಕ ಹೇರಿಕೆ ನಿಶ್ಚಿತವೆಂಬ ಕಾರಣಕ್ಕೆ ಬೆಲೆಗಳು ಏರಿಕೆ ಆಗುತ್ತಿರಬಹುದು. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 102 ರೂ ಇದೆ. ಚೆನ್ನೈ ಮೊದಲಾದೆಡೆ 111 ರೂ ಇದೆ.

Gold Rate Today Bangalore: ಚಿನ್ನದ ಬೆಲೆ ಗುರುವಾರವೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Mar 27, 2025 | 10:35 AM

ಬೆಂಗಳೂರು, ಮಾರ್ಚ್ 27: ಚಿನ್ನದ ಬೆಲೆ ಸತತವಾಗಿ ಏರಿಕೆ ಆಗುತ್ತಿದೆ. ನಿನ್ನೆ ಬುಧವಾರ ಗ್ರಾಮ್​​ಗೆ 10 ರೂನಷ್ಟು ಅಲ್ಪ ಹೆಚ್ಚಳವಾಗಿದ್ದ 22 ಕ್ಯಾರಟ್ ಚಿನ್ನದ ಬೆಲೆ (Gold Rates) ಇಂದು ಗುರುವಾರ 40 ರೂನಷ್ಟು ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ ಗ್ರಾಮ್​​ಗೆ 44 ರೂ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಬೆಂಗಳೂರಿನಲ್ಲಿ 8,235 ರೂ ಆದರೆ, ಅಪರಂಜಿ ಚಿನ್ನದ ಬೆಲೆ 8,984 ರೂಗೆ ಏರಿದೆ. ವಿದೇಶಗಳಲ್ಲಿ ದುಬೈನಲ್ಲಿ ಬೆಲೆ ತುಸು ಇಳಿಕೆ ಆಗಿದೆ. ಉಳಿದ ಹೆಚ್ಚಿನ ಕಡೆ ಅಲ್ಪ ಏರಿಕೆ ಆಗಿದೆ. ಬೆಳ್ಳಿ ಬೆಲೆ ಮತ್ತೆ ಸ್ಥಿರತೆ ಪಡೆದುಕೊಂಡಂತಿದೆ. ಇವತ್ತೂ ಕೂಡ ಬೆಳ್ಳಿ ಬೆಲೆಯಲ್ಲಿ ಹೆಚ್ಚಳ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 82,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 89,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 82,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 27ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,840 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,020 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 82,350 ರೂ
  • ಚೆನ್ನೈ: 82,350 ರೂ
  • ಮುಂಬೈ: 82,350 ರೂ
  • ದೆಹಲಿ: 82,500 ರೂ
  • ಕೋಲ್ಕತಾ: 82,350 ರೂ
  • ಕೇರಳ: 82,350 ರೂ
  • ಅಹ್ಮದಾಬಾದ್: 82,400 ರೂ
  • ಜೈಪುರ್: 82,500 ರೂ
  • ಲಕ್ನೋ: 82,500 ರೂ
  • ಭುವನೇಶ್ವರ್: 82,350 ರೂ

ಇದನ್ನೂ ಓದಿ: ರೇಷನ್ ಕಾರ್ಡ್​​ಗೆ ಇ-ಕೆವೈಸಿ ಸಲ್ಲಿಸಲು ಮಾರ್ಚ್ 31 ಡೆಡ್​ಲೈನ್; ತಪ್ಪಿದರೆ ಕೈತಪ್ಪಬಹುದು ಸಬ್ಸಿಡಿ

ಇದನ್ನೂ ಓದಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,230 ರಿಂಗಿಟ್ (81,920 ರುಪಾಯಿ)
  • ದುಬೈ: 3,365 ಡಿರಾಮ್ (78,630 ರುಪಾಯಿ)
  • ಅಮೆರಿಕ: 915 ಡಾಲರ್ (78,540 ರುಪಾಯಿ)
  • ಸಿಂಗಾಪುರ: 1,265 ಸಿಂಗಾಪುರ್ ಡಾಲರ್ (81,120 ರುಪಾಯಿ)
  • ಕತಾರ್: 3,410 ಕತಾರಿ ರಿಯಾಲ್ (80,290 ರೂ)
  • ಸೌದಿ ಅರೇಬಿಯಾ: 3,440 ಸೌದಿ ರಿಯಾಲ್ (78,710 ರುಪಾಯಿ)
  • ಓಮನ್: 359.50 ಒಮಾನಿ ರಿಯಾಲ್ (80,150 ರುಪಾಯಿ)
  • ಕುವೇತ್: 277.50 ಕುವೇತಿ ದಿನಾರ್ (77,240 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,200 ರೂ
  • ಚೆನ್ನೈ: 11,100 ರೂ
  • ಮುಂಬೈ: 10,200 ರೂ
  • ದೆಹಲಿ: 10,200 ರೂ
  • ಕೋಲ್ಕತಾ: 10,200 ರೂ
  • ಕೇರಳ: 11,100 ರೂ
  • ಅಹ್ಮದಾಬಾದ್: 10,200 ರೂ
  • ಜೈಪುರ್: 10,200 ರೂ
  • ಲಕ್ನೋ: 10,200 ರೂ
  • ಭುವನೇಶ್ವರ್: 11,100 ರೂ
  • ಪುಣೆ: 10,200

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us