AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 29th March: ಚಿನ್ನದ ಬೆಲೆ ಸತತ ಹೆಚ್ಚಳ; ಬೆಳ್ಳಿಯೂ ತುಸು ದುಬಾರಿ; ಇಲ್ಲಿದೆ ಶುಕ್ರವಾರದ ದರಪಟ್ಟಿ

Bullion Market 2024 March 29th: ಚಿನ್ನದ ಬೆಲೆ ಸತತ ಎರಡನೇ ದಿನ ಹೆಚ್ಚಳವಾಗಿದೆ. ಎರಡು ದಿನದಲ್ಲಿ ಗ್ರಾಮ್​ಗೆ 55 ರೂನಷ್ಟು ಬೆಲೆ ಏರಿಕೆ ಆಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 61,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 67,310 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 61,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,590 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 29th March: ಚಿನ್ನದ ಬೆಲೆ ಸತತ ಹೆಚ್ಚಳ; ಬೆಳ್ಳಿಯೂ ತುಸು ದುಬಾರಿ; ಇಲ್ಲಿದೆ ಶುಕ್ರವಾರದ ದರಪಟ್ಟಿ
ಚಿನ್ನ
TV9 Web
| Edited By: |

Updated on: Mar 29, 2024 | 5:00 AM

Share

ಬೆಂಗಳೂರು, ಮಾರ್ಚ್ 29: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ಶುಕ್ರವಾರ ಹೆಚ್ಚಳವಾಗಿದೆ. ಚಿನ್ನದ ಬೆಲೆ ಸತತ ಏರಿಕೆ ಕಂಡಿದೆ. ನಿನ್ನೆ ತುಸು ಕಡಿಮೆ ಆಗಿದ್ದ ಬೆಳ್ಳಿ ಬೆಲೆ ಇಂದು ಗಣನೀಯವಾಗಿ ಹೆಚ್ಚಿದೆ. ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಹೆಚ್ಚಾಗಿದೆ. ಎರಡು ದಿನದಲ್ಲಿ ಗ್ರಾಮ್​ಗೆ 55 ರೂ ಬೆಲೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಶುಕ್ರವಾರ ಗ್ರಾಮ್​ಗೆ 30 ಪೈಸೆಯಷ್ಟು ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 61,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 67,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,750 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 61,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,590 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,310 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 775 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,310 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 759 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 61,700 ರೂ
  • ಚೆನ್ನೈ: 62,500 ರೂ
  • ಮುಂಬೈ: 61,700 ರೂ
  • ದೆಹಲಿ: 61,850 ರೂ
  • ಕೋಲ್ಕತಾ: 61,700 ರೂ
  • ಕೇರಳ: 61,700 ರೂ
  • ಅಹ್ಮದಾಬಾದ್: 61,750 ರೂ
  • ಜೈಪುರ್: 61,850 ರೂ
  • ಲಕ್ನೋ: 61,850 ರೂ
  • ಭುವನೇಶ್ವರ್: 61,700 ರೂ

ಇದನ್ನೂ ಓದಿ: ಏಪ್ರಿಲ್ 1ರಿಂದ ಆದಾಯ ತೆರಿಗೆ ಹಾಗೂ ಹಣಕಾಸು ನಿಯಮಗಳಲ್ಲಿ ಈ ಪ್ರಮುಖ ಬದಲಾವಣೆಗಳಿವೆ, ಗಮನಿಸಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,290 ರಿಂಗಿಟ್ (57,961 ರುಪಾಯಿ)
  • ದುಬೈ: 2,462.50 ಡಿರಾಮ್ (55,922 ರುಪಾಯಿ)
  • ಅಮೆರಿಕ: 670 ಡಾಲರ್ (55,875 ರುಪಾಯಿ)
  • ಸಿಂಗಾಪುರ: 918 ಸಿಂಗಾಪುರ್ ಡಾಲರ್ (56,669 ರುಪಾಯಿ)
  • ಕತಾರ್: 2,520 ಕತಾರಿ ರಿಯಾಲ್ (57,624 ರೂ)
  • ಸೌದಿ ಅರೇಬಿಯಾ: 2,530 ಸೌದಿ ರಿಯಾಲ್ (56,258 ರುಪಾಯಿ)
  • ಓಮನ್: 266.50 ಒಮಾನಿ ರಿಯಾಲ್ (57,724 ರುಪಾಯಿ)
  • ಕುವೇತ್: 208.50 ಕುವೇತಿ ದಿನಾರ್ (56,505 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,590 ರೂ
  • ಚೆನ್ನೈ: 8,050 ರೂ
  • ಮುಂಬೈ: 7,750 ರೂ
  • ದೆಹಲಿ: 7,750 ರೂ
  • ಕೋಲ್ಕತಾ: 7,750 ರೂ
  • ಕೇರಳ: 8,050 ರೂ
  • ಅಹ್ಮದಾಬಾದ್: 7,750 ರೂ
  • ಜೈಪುರ್: 7,750 ರೂ
  • ಲಕ್ನೋ: 7,750 ರೂ
  • ಭುವನೇಶ್ವರ್: 8,050 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್