Kannada News Business Gold Prices March 31st 2024, Gold Rates See Sharp Rise, Silver In Mixed Experience
Gold Silver Price on 31st March: ಅಪ್ಪಟ ಚಿನ್ನವಾಯಿತು ಚಿನ್ನದ ಬೆಲೆ; ಬೆಳ್ಳಿ ದರದಲ್ಲಿ ಗಣನೀಯ ಏರಿಕೆ ಇಲ್ಲ
Bullion Market 2024 March 31st: ಚಿನ್ನ ಈ ವಾರದ ಕೊನೆಯಲ್ಲಿ ಅದ್ಭುತ ಬೇಡಿಕೆ ಪಡೆದಿದೆ. ಪರಿಣಾಮವಾಗಿ ಬೆಲೆ ಗಣನೀಯವಾಗಿ ಹೆಚ್ಚಾಗಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 68,730 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 77.80 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 63,000 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,580 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಮಾರ್ಚ್ 31: ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಗಣನೀಯವಾಗಿ ಹೆಚ್ಚಾಗಿದೆ. ಅದರಲ್ಲೂ ಚಿನ್ನದ ಬೆಲೆ ಅಸ್ವಾಭಾವಿಕ ರೀತಿಯಲ್ಲಿ ಬೇಡಿಕೆ ಕುದುರಿಸಿದೆ. ಈ ವಾರ ಒಂದು ಗ್ರಾಮ್ ಚಿನ್ನದ ಬೆಲೆ 200 ರುಪಾಯಿಗೂ ಹೆಚ್ಚು ಏರಿರುವುದು ಗಮನಾರ್ಹ. ಅದರಲ್ಲೂ ವಾರಾಂತ್ಯದಲ್ಲಿ ಬರೋಬ್ಬರಿ 130 ರೂಗಳಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಕಳೆದ ಹತ್ತು ದಿನದಲ್ಲಿ ಒಟ್ಟಾರೆ ಒಂದು ಗ್ರಾಮ್ಗೆ 30 ಪೈಸೆ ಮಾತ್ರವೇ ಏರಿರುವುದು. ಆ ಮಟ್ಟಿಗೆ ಬೆಳ್ಳಿ ಹೆಚ್ಚು ಬೇಡಿಕೆ ಪಡೆದಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 63,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 68,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,780 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 63,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,580 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 31ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 778 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 68,730 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 758 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)