Gold Rate Today Bangalore: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2025 March 7th: ಇಂದು ಶುಕ್ರವಾರ ಚಿನ್ನದ ಬೆಲೆ ಇಳಿಕೆಯಾದರೆ, ಬೆಳ್ಳಿ ಬೆಲೆ ತುಸು ಏರಿಕೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 8,020 ರೂ ಇದ್ದದ್ದು 7,990 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 8,716 ರೂಗೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 98 ರೂ ಇದ್ದದ್ದು 99 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಳ್ಳಿ ಬೆಲೆ 108 ರೂಗೆ ಏರಿಕೆ ಆಗಿದೆ.

Gold Rate Today Bangalore: ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Mar 07, 2025 | 10:31 AM

ಬೆಂಗಳೂರು, ಮಾರ್ಚ್ 07: ಚಿನ್ನದ ಬೆಲೆ ಸತತವಾಗಿ ಇಳಿಮುಖವಾಗಿದೆ. ಎರಡು ದಿನ ಸತತ ಏರಿಕೆ ಬಳಿಕ ಎರಡು ದಿನ ಸತತವಾಗಿ ಇಳಿಕೆಯಾಗಿದೆ. ನಿನ್ನೆ 45 ರೂ ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಶುಕ್ರವಾರ 30 ರೂ ಕಡಿಮೆ ಆಗಿದೆ. ಎರಡು ದಿನದಲ್ಲಿ ಒಟ್ಟು 75 ರೂ ಇಳಿಕೆಯಾಗಿದೆ. ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 8,000 ರೂಗಿಂತ ಒಳಗೆ ಬಂದಿದೆ. ಅಪರಂಜಿ ಚಿನ್ನದ ಬೆಲೆ 8,716 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಒಂದು ರೂ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 79,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 79,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 07ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,160 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 79,900 ರೂ
  • ಚೆನ್ನೈ: 79,900 ರೂ
  • ಮುಂಬೈ: 79,900 ರೂ
  • ದೆಹಲಿ: 80,050 ರೂ
  • ಕೋಲ್ಕತಾ: 79,900 ರೂ
  • ಕೇರಳ: 79,900 ರೂ
  • ಅಹ್ಮದಾಬಾದ್: 79,950 ರೂ
  • ಜೈಪುರ್: 80,050 ರೂ
  • ಲಕ್ನೋ: 80,050 ರೂ
  • ಭುವನೇಶ್ವರ್: 79,900 ರೂ

ಇದನ್ನೂ ಓದಿ: ಚಿನ್ನ ಒತ್ತೆ ಇಟ್ಟು ಸಾಲ ಪಡೆಯುವುದು ಕಷ್ಟವಾಗುತ್ತಾ? ನಿಯಮ ಬಿಗಿಗೊಳಿಸಲು ಬ್ಯಾಂಕುಗಳಿಗೆ ಆರ್​ಬಿಐ ಸೂಚಿಸುವ ಸಾಧ್ಯತೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,090 ರಿಂಗಿಟ್ (80,510 ರುಪಾಯಿ)
  • ದುಬೈ: 3,255 ಡಿರಾಮ್ (77,270 ರುಪಾಯಿ)
  • ಅಮೆರಿಕ: 890 ಡಾಲರ್ (77,590 ರುಪಾಯಿ)
  • ಸಿಂಗಾಪುರ: 1,209 ಸಿಂಗಾಪುರ್ ಡಾಲರ್ (79,070 ರುಪಾಯಿ)
  • ಕತಾರ್: 3,270 ಕತಾರಿ ರಿಯಾಲ್ (78,200 ರೂ)
  • ಸೌದಿ ಅರೇಬಿಯಾ: 3,330 ಸೌದಿ ರಿಯಾಲ್ (77,380 ರುಪಾಯಿ)
  • ಓಮನ್: 345 ಒಮಾನಿ ರಿಯಾಲ್ (78,120 ರುಪಾಯಿ)
  • ಕುವೇತ್: 267.70 ಕುವೇತಿ ದಿನಾರ್ (75,730 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,900 ರೂ
  • ಚೆನ್ನೈ: 10,800 ರೂ
  • ಮುಂಬೈ: 9,900 ರೂ
  • ದೆಹಲಿ: 9,900 ರೂ
  • ಕೋಲ್ಕತಾ: 9,900 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 9,900 ರೂ
  • ಜೈಪುರ್: 9,900 ರೂ
  • ಲಕ್ನೋ: 9,900 ರೂ
  • ಭುವನೇಶ್ವರ್: 10,800 ರೂ
  • ಪುಣೆ: 9,900

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us