AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಮತ್ತೆ ಇಳಿಕೆ; ಎಂಸಿಎಕ್ಸ್​​ನಲ್ಲಿ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2025 April 7th: ಜಾಗತಿಕವಾಗಿ ಈಕ್ವಿಟಿ ಮಾರುಕಟ್ಟೆ ಸಖತ್ ಕುಸಿತ ಕಾಣುತ್ತಿರುವ ಹಿನ್ನೆಲೆಯಲ್ಲಿ ಚಿನ್ನ, ಬೆಳ್ಳಿಗಳಿಗೆ ಭಾರೀ ಬೇಡಿಕೆ ಇದೆ. ಎಂಸಿಎಕ್ಸ್ ಮಾರುಕಟ್ಟೆಯಲ್ಲಿ ಎರಡೂ ಲೋಹಗಳ ಬೆಲೆ ಏರಿಕೆ ಆಗಿದೆ. ಆದರೆ ಭಾರತದ ಮಾರುಕಟ್ಟೆಯಲ್ಲಿ ಸೋಮವಾರ ಚಿನ್ನದ ಬೆಲೆಯಲ್ಲಿ ಗ್ರಾಮ್​​ಗೆ 25 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ.

Gold Rate Today Bangalore: ಚಿನ್ನದ ಬೆಲೆ ಮತ್ತೆ ಇಳಿಕೆ; ಎಂಸಿಎಕ್ಸ್​​ನಲ್ಲಿ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 07, 2025 | 10:36 AM

Share

ಬೆಂಗಳೂರು, ಏಪ್ರಿಲ್ 7: ಭಾರತದಲ್ಲಿ ಚಿನ್ನದ ಬೆಲೆ (Gold rate today) ಇಂದು ಸೋಮವಾರ ಗ್ರಾಮ್​​ಗೆ 25 ರೂನಷ್ಟು ಕಡಿಮೆಗೊಂಡಿದೆ. 8,310 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,285 ರೂಗೆ ಇಳಿದಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಬೆಳಗ್ಗೆ ದರ ವ್ಯತ್ಯಯವಾಗಿಲ್ಲ. ಆದರೆ, ಎಂಸಿಎಕ್ಸ್ ಅಥವಾ ಮಲ್ಟಿ ಕಮಾಡಿಟಿ ಎಕ್ಸ್​ಚೇಂಜ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಹೆಚ್ಚಾಗಿವೆ. ಚಿನ್ನದ ಬೆಲೆಯಲ್ಲಿ ನೂರು ರೂಗೆ 38 ಪೈಸೆಯಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ನೂರು ರೂಗೆ ಎರಡು ರೂನಷ್ಟು ಹೆಚ್ಚಳವಾಗಿದೆ. ಜಾಗತಿಕವಾಗಿ ಷೇರು ಮಾರುಕಟ್ಟೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಚಿನ್ನ, ಬೆಳ್ಳಿಗಳಿಗೆ ಮತ್ತೆ ಡಿಮ್ಯಾಂಡ್ ಹುಟ್ಟಿದೆ. ಭಾರತದಲ್ಲೂ ಇವತ್ತು ಸಂಜೆಯ ವೇಳೆಗೆ ಭರ್ಜರಿ ಬೆಲೆ ಏರಿಕೆ ಆಗುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 82,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 90,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 82,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 7ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,380 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,790 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 90,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 82,850 ರೂ
  • ಚೆನ್ನೈ: 82,850 ರೂ
  • ಮುಂಬೈ: 82,850 ರೂ
  • ದೆಹಲಿ: 83,000 ರೂ
  • ಕೋಲ್ಕತಾ: 82,850 ರೂ
  • ಕೇರಳ: 82,850 ರೂ
  • ಅಹ್ಮದಾಬಾದ್: 82,900 ರೂ
  • ಜೈಪುರ್: 83,000 ರೂ
  • ಲಕ್ನೋ: 83,000 ರೂ
  • ಭುವನೇಶ್ವರ್: 82,850 ರೂ

ಇದನ್ನೂ ಓದಿ: ಚಾಣಕ್ಷ್ಯ ವಾರನ್ ಬಫೆಟ್; ಊರೆಲ್ಲಾ ತೋಪೆದ್ದರೂ ಕರಗಲಿಲ್ಲ ಇವರ ಶ್ರೀಮಂತಿಕೆ; ಇದು ಹೇಗೆ ಸಾಧ್ಯ?

ಇದನ್ನೂ ಓದಿ
Image
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
Image
ಚಿನ್ನದ ಬೆಲೆ ಇಳಿಕೆ ಯಾವಾಗ?
Image
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
Image
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,300 ರಿಂಗಿಟ್ (82,390 ರುಪಾಯಿ)
  • ದುಬೈ: 3,390 ಡಿರಾಮ್ (79,030 ರುಪಾಯಿ)
  • ಅಮೆರಿಕ: 920 ಡಾಲರ್ (78,750 ರುಪಾಯಿ)
  • ಸಿಂಗಾಪುರ: 1,276 ಸಿಂಗಾಪುರ್ ಡಾಲರ್ (81,080 ರುಪಾಯಿ)
  • ಕತಾರ್: 3,425 ಕತಾರಿ ರಿಯಾಲ್ (80,430 ರೂ)
  • ಸೌದಿ ಅರೇಬಿಯಾ: 3,460 ಸೌದಿ ರಿಯಾಲ್ (78,920 ರುಪಾಯಿ)
  • ಓಮನ್: 360.50 ಒಮಾನಿ ರಿಯಾಲ್ (80,160 ರುಪಾಯಿ)
  • ಕುವೇತ್: 279.90 ಕುವೇತಿ ದಿನಾರ್ (77,900 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,400 ರೂ
  • ಚೆನ್ನೈ: 10,300 ರೂ
  • ಮುಂಬೈ: 9,400 ರೂ
  • ದೆಹಲಿ: 9,400 ರೂ
  • ಕೋಲ್ಕತಾ: 9,400 ರೂ
  • ಕೇರಳ: 10,300 ರೂ
  • ಅಹ್ಮದಾಬಾದ್: 9,400 ರೂ
  • ಜೈಪುರ್: 9,400 ರೂ
  • ಲಕ್ನೋ: 9,400 ರೂ
  • ಭುವನೇಶ್ವರ್: 10,300 ರೂ
  • ಪುಣೆ: 9,400

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ