ಬೆಂಗಳೂರು, ಏಪ್ರಿಲ್ 7: ಭಾರತದಲ್ಲಿ ಚಿನ್ನದ ಬೆಲೆ (Gold rate today) ಇಂದು ಸೋಮವಾರ ಗ್ರಾಮ್ಗೆ 25 ರೂನಷ್ಟು ಕಡಿಮೆಗೊಂಡಿದೆ. 8,310 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ 8,285 ರೂಗೆ ಇಳಿದಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಬೆಳಗ್ಗೆ ದರ ವ್ಯತ್ಯಯವಾಗಿಲ್ಲ. ಆದರೆ, ಎಂಸಿಎಕ್ಸ್ ಅಥವಾ ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಹೆಚ್ಚಾಗಿವೆ. ಚಿನ್ನದ ಬೆಲೆಯಲ್ಲಿ ನೂರು ರೂಗೆ 38 ಪೈಸೆಯಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ನೂರು ರೂಗೆ ಎರಡು ರೂನಷ್ಟು ಹೆಚ್ಚಳವಾಗಿದೆ. ಜಾಗತಿಕವಾಗಿ ಷೇರು ಮಾರುಕಟ್ಟೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಚಿನ್ನ, ಬೆಳ್ಳಿಗಳಿಗೆ ಮತ್ತೆ ಡಿಮ್ಯಾಂಡ್ ಹುಟ್ಟಿದೆ. ಭಾರತದಲ್ಲೂ ಇವತ್ತು ಸಂಜೆಯ ವೇಳೆಗೆ ಭರ್ಜರಿ ಬೆಲೆ ಏರಿಕೆ ಆಗುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 82,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 90,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 82,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಚಾಣಕ್ಷ್ಯ ವಾರನ್ ಬಫೆಟ್; ಊರೆಲ್ಲಾ ತೋಪೆದ್ದರೂ ಕರಗಲಿಲ್ಲ ಇವರ ಶ್ರೀಮಂತಿಕೆ; ಇದು ಹೇಗೆ ಸಾಧ್ಯ?
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ