Kannada News Business Gold Prices March 8th 2024, Yellow Metal Rates Steep Hike As US Bank Rates Likely To Drop down
Gold Silver Price on 8th March: ಚಿನ್ನದ ಬೆಲೆ ಒಂದು ವಾರದಲ್ಲಿ ಗ್ರಾಮ್ಗೆ 250 ರೂನಷ್ಟು ಹೆಚ್ಚಳ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
Bullion Market 2024: ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿದರ ಕಡಿಮೆ ಮಾಡುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಚಿನ್ನಕ್ಕೆ ಬೇಡಿಕೆ ವಿಪರೀತ ಹೆಚ್ಚುತ್ತಿದೆ. ಪರಿಣಾಮವಾಗಿ ಬೆಲೆ ಏರಿಕೆ ಯದ್ವಾತದ್ವಾ ನಡೆದಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 65,560 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 75 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 60,100 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,410 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಮಾರ್ಚ್ 08: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಯದ್ವಾತದ್ವಾ ಏರಿಕೆ ಆಗಿದೆ. ಅಮೆರಿಕದಲ್ಲಿ ಫೆಡರಲ್ ರಿಸರ್ವ್ ಬಡ್ಡಿ ದರ ಕಡಿತಗೊಳಿಸುವ ಸುಳಿವು ನೀಡಿದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ವಲಸೆ ಹೋಗುತ್ತಿದ್ದಾರೆ. ಹೀಗಾಗಿ, ಚಿನ್ನದ ಬೆಲೆ ತೀರಾ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ ಒಂದು ಗ್ರಾಮ್ಗೆ ಬರೋಬ್ಬರಿ 250 ರೂಗೂ ಹೆಚ್ಚು ಬೆಲೆ ಹೆಚ್ಚಳ ಆಗಿರುವುದು ಗಮನಾರ್ಹ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 65,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,410 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 8ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 65,560 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 741 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)