Gold Rate Today Bangalore: ಚಿನ್ನದ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2025 April 8th: ಚಿನ್ನದ ಬೆಲೆಯ ಇಳಿಕೆ ಇಂದೂ ಮುಂದುವರಿದೆ. ಮಂಗಳವಾರ ಗ್ರಾಮ್​​ಗೆ 60 ರೂ ಬೆಲೆ ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 8,225 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 8,973 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ 94 ರೂ ಇದೆ. ಒಂದು ಹಂತದಲ್ಲಿ ಇದರ ಬೆಲೆ 105 ರೂಗೆ ಏರಿ ಹೋಗಿತ್ತು. ಚೆನ್ನೈ ಮೊದಲಾದೆಡೆ ಇವತ್ತು ಬೆಳ್ಳಿ ಬೆಲೆ 103 ರೂ ಇದೆ.

Gold Rate Today Bangalore: ಚಿನ್ನದ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ

Updated on: Apr 08, 2025 | 10:13 AM

ಬೆಂಗಳೂರು, ಏಪ್ರಿಲ್ 8: ಜಾಗತಿಕ ಟ್ಯಾರಿಫ್ ಯುದ್ಧದ ಮಧ್ಯೆ ಚಿನ್ನದ ಬೆಲೆ (Gold rates) ಸತತ ಇಳಿಕೆ ಮುಂದುವರಿದಿದೆ. ನಿನ್ನೆ 25 ರೂನಷ್ಟು ಕಡಿಮೆ ಆಗಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ 60 ರೂ ಕುಸಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 8,285 ರೂ ಇದ್ದದ್ದು 8,225 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 9,000 ರೂ ಒಳಗೆ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 82,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 89,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 82,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,730 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,300 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 82,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 89,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 82,250 ರೂ
  • ಚೆನ್ನೈ: 82,250 ರೂ
  • ಮುಂಬೈ: 82,250 ರೂ
  • ದೆಹಲಿ: 82,400 ರೂ
  • ಕೋಲ್ಕತಾ: 82,250 ರೂ
  • ಕೇರಳ: 82,250 ರೂ
  • ಅಹ್ಮದಾಬಾದ್: 82,300 ರೂ
  • ಜೈಪುರ್: 82,400 ರೂ
  • ಲಕ್ನೋ: 82,400 ರೂ
  • ಭುವನೇಶ್ವರ್: 82,250 ರೂ

ಇದನ್ನೂ ಓದಿ: ಈ ಪೋಸ್ಟ್ ಆಫೀಸ್ ಠೇವಣಿ ಪ್ಲಾನ್ ಸಖತ್ ಆದಾಯ ಸೃಷ್ಟಿಸುವ ಮಾರ್ಗ

ಇದನ್ನೂ ಓದಿ
ಗೋಲ್ಡ್ ಮಾನಿಟೈಸೇಶನ್ ಸ್ಕೀಮ್ ನಿಲ್ಲಿಸಿದ ಸರ್ಕಾರ
ಚಿನ್ನದ ಬೆಲೆ ಇಳಿಕೆ ಯಾವಾಗ?
ದುಬೈನಿಂದ ಎಷ್ಟು ಚಿನ್ನ ತಂದರೆ ಎಷ್ಟು ಟ್ಯಾಕ್ಸ್?
ಮುಂಬರುವ ದಿನಗಳಲ್ಲಿ ಚಿನ್ನಕ್ಕೆ ಪ್ರಾಶಸ್ತ್ಯ: ಸಿಇಎ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,250 ರಿಂಗಿಟ್ (81,390 ರುಪಾಯಿ)
  • ದುಬೈ: 3,315 ಡಿರಾಮ್ (77,480 ರುಪಾಯಿ)
  • ಅಮೆರಿಕ: 905 ಡಾಲರ್ (77,770 ರುಪಾಯಿ)
  • ಸಿಂಗಾಪುರ: 1,265 ಸಿಂಗಾಪುರ್ ಡಾಲರ್ (80,540 ರುಪಾಯಿ)
  • ಕತಾರ್: 3,380 ಕತಾರಿ ರಿಯಾಲ್ (79,600 ರೂ)
  • ಸೌದಿ ಅರೇಬಿಯಾ: 3,390 ಸೌದಿ ರಿಯಾಲ್ (77,510 ರುಪಾಯಿ)
  • ಓಮನ್: 356 ಒಮಾನಿ ರಿಯಾಲ್ (79,390 ರುಪಾಯಿ)
  • ಕುವೇತ್: 272.90 ಕುವೇತಿ ದಿನಾರ್ (76,100 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,400 ರೂ
  • ಚೆನ್ನೈ: 10,300 ರೂ
  • ಮುಂಬೈ: 9,400 ರೂ
  • ದೆಹಲಿ: 9,400 ರೂ
  • ಕೋಲ್ಕತಾ: 9,400 ರೂ
  • ಕೇರಳ: 10,300 ರೂ
  • ಅಹ್ಮದಾಬಾದ್: 9,400 ರೂ
  • ಜೈಪುರ್: 9,400 ರೂ
  • ಲಕ್ನೋ: 9,400 ರೂ
  • ಭುವನೇಶ್ವರ್: 10,300 ರೂ
  • ಪುಣೆ: 9,400

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us