AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಭಾರತದಲ್ಲಿ ಚಿನ್ನದ ಬೆಲೆ ತುಸು ಏರಿಕೆ; ವಿದೇಶಗಳಲ್ಲಿ ಏರಿಳಿತ; ಬೆಳ್ಳಿ ಬೆಲೆ ಏರಿಳಿತವಿಲ್ಲ; ಈಗೆಷ್ಟಿದೆ ದರ, ವಿವರ ನೋಡಿ

Bullion Market 2023, May 10th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,700 ರುಪಾಯಿಗೆ ಏರಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,850 ರುಪಾಯಿ ಆಗಿದೆ. ಬೆಳ್ಳಿ ಬೆಲೆ ಸದ್ಯ ಗ್ರಾಮ್​ಗೆ 78.10 ರು ಹೊಂದಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಭಾರತದಲ್ಲಿ ಚಿನ್ನದ ಬೆಲೆ ತುಸು ಏರಿಕೆ; ವಿದೇಶಗಳಲ್ಲಿ ಏರಿಳಿತ; ಬೆಳ್ಳಿ ಬೆಲೆ ಏರಿಳಿತವಿಲ್ಲ; ಈಗೆಷ್ಟಿದೆ ದರ, ವಿವರ ನೋಡಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 10, 2023 | 5:00 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಮೇ 10ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 56,700 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,810 ರೂ ಇದೆ.
  • ಅನಿವಾಸಿ ಭಾರತೀಯರು ಹೆಚ್ಚಾಗಿ ನೆಲಸಿರುವ ಅಮೆರಿಕ, ದುಬೈ, ಮಲೇಷ್ಯಾ, ಸಿಂಗಾಪುರ ಮೊದಲಾದೆಡೆಯೂ ಚಿನ್ನದ ಬೆಲೆ ಏರಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,270 ರೂ ಇದೆ.

ಬೆಂಗಳೂರು: ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ ಇಳಿಕೆ ಕಂಡಿದ್ದ ಸ್ವರ್ಣ ಈ ವಾರ ಮತ್ತೆ ಬೇಡಿಕೆ ಕುದುರಿಸಿಕೊಂಡಿದೆ. ಬೆಳ್ಳಿ ಬೆಲೆ ಏಪ್ರಿಲ್ 9ರಂದು ಸ್ತಬ್ಧಗೊಂಡಿತ್ತು. ಇಂದೂ ಕೂಡ ಯಥಾಸ್ಥಿತಿಯಲ್ಲಿ ಮುಂದುವರಿಯಬಹುದು. ಭಾರತದಲ್ಲಿ ಮಾತ್ರವಲ್ಲ ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,810 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,270 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿGovt Schemes: ಕೇಂದ್ರದ ಈ 3 ಸ್ಕೀಮ್​ಗಳಿಗೆ 8 ವರ್ಷ; ಎಷ್ಟು ಕೋಟಿ ಭಾರತೀಯರನ್ನು ತಲುಪಿವೆ ಈ ಸ್ಕೀಮ್​ಗಳು?

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 10ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,850 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 781 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,900 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 827 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,750 ರೂ
  • ಚೆನ್ನೈ: 57,200 ರೂ
  • ಮುಂಬೈ: 56,700 ರೂ
  • ದೆಹಲಿ: 56,850 ರೂ
  • ಕೋಲ್ಕತಾ: 56,700 ರೂ
  • ಕೇರಳ: 56,700 ರೂ
  • ಅಹ್ಮದಾಬಾದ್: 56,750 ರೂ
  • ಜೈಪುರ್: 56,850 ರೂ
  • ಲಕ್ನೋ: 56,850 ರೂ
  • ಭುವನೇಶ್ವರ್: 56,700 ರೂ

ಇದನ್ನೂ ಓದಿPod Taxi: ಭಾರತದ ಮೊದಲ ಚಾಲಕರಹಿತ ಪೋಡ್ ಟ್ಯಾಕ್ಸಿ; ಏನಿದರ ವಿಶೇಷತೆ, ಬೆಂಗಳೂರಿಗೆ ಯಾಕೆ ಬರಲಿಲ್ಲ ಈ ಪ್ರಾಜೆಕ್ಟ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (52,854 ರುಪಾಯಿ)
  • ದುಬೈ: 2272.50 ಡಿರಾಮ್ (50,798 ರುಪಾಯಿ)
  • ಅಮೆರಿಕ: 620 ಡಾಲರ್ (50,893 ರುಪಾಯಿ)
  • ಸಿಂಗಾಪುರ: 834 ಸಿಂಗಾಪುರ್ ಡಾಲರ್ (51,581 ರುಪಾಯಿ)
  • ಕತಾರ್: 2,330 ಕತಾರಿ ರಿಯಾಲ್ (52,537 ರೂ)
  • ಓಮನ್: 247 ಒಮಾನಿ ರಿಯಾಲ್ (52,661 ರುಪಾಯಿ)
  • ಕುವೇತ್: 193 ಕುವೇತಿ ದಿನಾರ್ (51,674 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,270 ರೂ
  • ಚೆನ್ನೈ: 8,270 ರೂ
  • ಮುಂಬೈ: 7,810 ರೂ
  • ದೆಹಲಿ: 7,810 ರೂ
  • ಕೋಲ್ಕತಾ: 7,810 ರೂ
  • ಕೇರಳ: 8,270 ರೂ
  • ಅಹ್ಮದಾಬಾದ್: 7,810 ರೂ
  • ಜೈಪುರ್: 7,810 ರೂ
  • ಲಕ್ನೋ: 7,81 ರೂ
  • ಭುವನೇಶ್ವರ್: 8,270 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?