ಬೆಂಗಳೂರು: ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ ಇಳಿಕೆ ಕಂಡಿದ್ದ ಸ್ವರ್ಣ ಈ ವಾರ ಮತ್ತೆ ಬೇಡಿಕೆ ಕುದುರಿಸಿಕೊಂಡಿದೆ. ಬೆಳ್ಳಿ ಬೆಲೆ ಏಪ್ರಿಲ್ 9ರಂದು ಸ್ತಬ್ಧಗೊಂಡಿತ್ತು. ಇಂದೂ ಕೂಡ ಯಥಾಸ್ಥಿತಿಯಲ್ಲಿ ಮುಂದುವರಿಯಬಹುದು. ಭಾರತದಲ್ಲಿ ಮಾತ್ರವಲ್ಲ ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,810 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 8,270 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: Govt Schemes: ಕೇಂದ್ರದ ಈ 3 ಸ್ಕೀಮ್ಗಳಿಗೆ 8 ವರ್ಷ; ಎಷ್ಟು ಕೋಟಿ ಭಾರತೀಯರನ್ನು ತಲುಪಿವೆ ಈ ಸ್ಕೀಮ್ಗಳು?
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Pod Taxi: ಭಾರತದ ಮೊದಲ ಚಾಲಕರಹಿತ ಪೋಡ್ ಟ್ಯಾಕ್ಸಿ; ಏನಿದರ ವಿಶೇಷತೆ, ಬೆಂಗಳೂರಿಗೆ ಯಾಕೆ ಬರಲಿಲ್ಲ ಈ ಪ್ರಾಜೆಕ್ಟ್?
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)