AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ಅತ್ಯಲ್ಪ ಇಳಿಕೆ; ಭಾರತ ಹಾಗೂ ವಿದೇಶಗಳಲ್ಲಿ ಸ್ವರ್ಣದ ದರ ಎಷ್ಟಿದೆ, ಇಲ್ಲಿದೆ ಡೀಟೇಲ್ಸ್

Bullion Market 2023, May 11th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,950 ರುಪಾಯಿಗೆ ಏರಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,130 ರುಪಾಯಿ ಆಗಿದೆ. ಬೆಳ್ಳಿ ಬೆಲೆ ಸದ್ಯ ಗ್ರಾಮ್​ಗೆ 78 ರು ಹೊಂದಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ಅತ್ಯಲ್ಪ ಇಳಿಕೆ; ಭಾರತ ಹಾಗೂ ವಿದೇಶಗಳಲ್ಲಿ ಸ್ವರ್ಣದ ದರ ಎಷ್ಟಿದೆ, ಇಲ್ಲಿದೆ ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 11, 2023 | 5:00 AM

Share

ಬೆಂಗಳೂರು: ಈ ವಾರ ಚಿನ್ನದ ಬೆಲೆ ಏರಿಕೆ (Gold Rates) ಮುಂದುವರಿದಿದೆ. ಕಳೆದ ವಾರಾಂತ್ಯದಲ್ಲಿ ಇಳಿಕೆ ಕಂಡಿದ್ದ ಸ್ವರ್ಣ ಈ ವಾರ ಮತ್ತೆ ಬೇಡಿಕೆ ಕುದುರಿಸಿಕೊಂಡಿದೆ. ಬೆಳ್ಳಿ ಬೆಲೆ ಏಪ್ರಿಲ್ 9ಮತ್ತು 10ರಂದು ಸ್ತಬ್ಧಗೊಂಡಿತ್ತು. ಇಂದೂ ಕೂಡ ತುಸು ಇಳಿಕೆ ಕಂಡಿದೆ. ಆದರೆ, ಚಿನ್ನದ ಬೆಲೆ ಏರಿಕೆ ಹೆಚ್ಚುತ್ತಲೇ ಇದೆ. ಭಾರತದಲ್ಲಿ ಮಾತ್ರವಲ್ಲ ಬಹುತೇಕ ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಹೆಚ್ಚುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,270 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿRD Rates: ಆರ್​ಡಿಗೆ ಅತಿಹೆಚ್ಚು ಬಡ್ಡಿ ನೀಡುವ ಬ್ಯಾಂಕುಗಳಿವು; ಅತ್ಯಂತ ಸುಲಭ ಹೂಡಿಕೆ ಆಯ್ಕೆ ಇದು

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 11ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,180 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 827 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,000 ರೂ
  • ಚೆನ್ನೈ: 57,370 ರೂ
  • ಮುಂಬೈ: 56,950 ರೂ
  • ದೆಹಲಿ: 57,100 ರೂ
  • ಕೋಲ್ಕತಾ: 56,950 ರೂ
  • ಕೇರಳ: 56,950 ರೂ
  • ಅಹ್ಮದಾಬಾದ್: 57,000 ರೂ
  • ಜೈಪುರ್: 57,100 ರೂ
  • ಲಕ್ನೋ: 57,100 ರೂ
  • ಭುವನೇಶ್ವರ್: 56,950 ರೂ

ಇದನ್ನೂ ಓದಿ: High Streets: ಬೆಂಗಳೂರೇ ಬೆಸ್ಟ್..! ಭಾರತದ ಟಾಪ್-10 ಹೈ ಸ್ಟ್ರೀಟ್​ಗಳಲ್ಲಿ ಎಂಜಿ ರೋಡ್ ಸೇರಿ ಬೆಂಗಳೂರಿನ 4 ರಸ್ತೆಗಳು; ಏನಿದು ಹೈ ಸ್ಟ್ರೀಟ್ ಎಂದರೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,880 ರಿಂಗಿಟ್ (52,854 ರುಪಾಯಿ)
  • ದುಬೈ: 2275 ಡಿರಾಮ್ (50,798 ರುಪಾಯಿ)
  • ಅಮೆರಿಕ: 620 ಡಾಲರ್ (50,893 ರುಪಾಯಿ)
  • ಸಿಂಗಾಪುರ: 839 ಸಿಂಗಾಪುರ್ ಡಾಲರ್ (51,581 ರುಪಾಯಿ)
  • ಕತಾರ್: 2,335 ಕತಾರಿ ರಿಯಾಲ್ (52,537 ರೂ)
  • ಓಮನ್: 247.50 ಒಮಾನಿ ರಿಯಾಲ್ (52,661 ರುಪಾಯಿ)
  • ಕುವೇತ್: 193 ಕುವೇತಿ ದಿನಾರ್ (51,674 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,270 ರೂ
  • ಚೆನ್ನೈ: 8,270 ರೂ
  • ಮುಂಬೈ: 7,800 ರೂ
  • ದೆಹಲಿ: 7,800 ರೂ
  • ಕೋಲ್ಕತಾ: 7,800 ರೂ
  • ಕೇರಳ: 8,270 ರೂ
  • ಅಹ್ಮದಾಬಾದ್: 7,800 ರೂ
  • ಜೈಪುರ್: 7,800 ರೂ
  • ಲಕ್ನೋ: 7,800 ರೂ
  • ಭುವನೇಶ್ವರ್: 8,270 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ