AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 13th May: ಚಿನ್ನ, ಬೆಳ್ಳಿ ಬೆಲೆ ಏರಿಕೆ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 13th: ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ 50 ಪೈಸೆ ಜಾಸ್ತಿಯಾಗಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,360 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 87 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,250 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,710 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 13th May: ಚಿನ್ನ, ಬೆಳ್ಳಿ ಬೆಲೆ ಏರಿಕೆ ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: May 13, 2024 | 5:02 AM

Share

ಬೆಂಗಳೂರು, ಮೇ 13: ಚಿನ್ನ, ಬೆಳ್ಳಿ ಬೆಲೆ ಏರಿಕೆಯ ಟ್ರೆಂಡ್ (Gold and silver Rates) ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 25 ರೂನಷ್ಟು ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 150 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಕೂಡ ಹತ್ತು ದಿನದಲ್ಲಿ ಒಂದೂವರೆ ರೂನಷ್ಟು ಹೆಚ್ಚಾಗಿದೆ. ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಇದೇ ರೀತಿ ಮುಂದುವರಿಯಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,710 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 865 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 847.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,250 ರೂ
  • ಚೆನ್ನೈ: 67,500 ರೂ
  • ಮುಂಬೈ: 67,250 ರೂ
  • ದೆಹಲಿ: 67,400 ರೂ
  • ಕೋಲ್ಕತಾ: 67,250 ರೂ
  • ಕೇರಳ: 67,250 ರೂ
  • ಅಹ್ಮದಾಬಾದ್: 67,300 ರೂ
  • ಜೈಪುರ್: 67,400 ರೂ
  • ಲಕ್ನೋ: 67,400 ರೂ
  • ಭುವನೇಶ್ವರ್: 67,250 ರೂ

ಇದನ್ನೂ ಓದಿ: ಚಿನ್ನದ ಬೆಲೆ ಹೆಚ್ಚಾದರೂ ಆಭರಣಗಳಿಗೆ ಕಡಿಮೆ ಆಗಿಲ್ಲ ಬೇಡಿಕೆ; 10ರಿಂದ 20 ಗ್ರಾಂ ಚಿನ್ನದ ಒಡವೆಗಳು ಹೆಚ್ಚು ಸೇಲ್; ಐದು ಗ್ರಾಮ್​ವೊಳಗಿನ ಜ್ಯೂವೆಲರಿ ಕೇಳೋರಿಲ್ಲ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,430 ರಿಂಗಿಟ್ (60,487 ರುಪಾಯಿ)
  • ದುಬೈ: 2,647.50 ಡಿರಾಮ್ (60,227 ರುಪಾಯಿ)
  • ಅಮೆರಿಕ: 720 ಡಾಲರ್ (60,158 ರುಪಾಯಿ)
  • ಸಿಂಗಾಪುರ: 996 ಸಿಂಗಾಪುರ್ ಡಾಲರ್ (61,432 ರುಪಾಯಿ)
  • ಕತಾರ್: 2,695 ಕತಾರಿ ರಿಯಾಲ್ (61,760 ರೂ)
  • ಸೌದಿ ಅರೇಬಿಯಾ: 2,710 ಸೌದಿ ರಿಯಾಲ್ (60,371 ರುಪಾಯಿ)
  • ಓಮನ್: 285.50 ಒಮಾನಿ ರಿಯಾಲ್ (61,973 ರುಪಾಯಿ)
  • ಕುವೇತ್: 225.50 ಕುವೇತಿ ದಿನಾರ್ (61,257 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,710 ರೂ
  • ಚೆನ್ನೈ: 9,050 ರೂ
  • ಮುಂಬೈ: 8,700 ರೂ
  • ದೆಹಲಿ: 8,700 ರೂ
  • ಕೋಲ್ಕತಾ: 8,700 ರೂ
  • ಕೇರಳ: 9,050 ರೂ
  • ಅಹ್ಮದಾಬಾದ್: 8,700 ರೂ
  • ಜೈಪುರ್: 8,700 ರೂ
  • ಲಕ್ನೋ: 8,700 ರೂ
  • ಭುವನೇಶ್ವರ್: 9,050 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ