Gold Rates: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ತುಸು ಅಗ್ಗ; ಅಮೆರಿಕದಲ್ಲಿ ಮಾತ್ರ ಸ್ವರ್ಣ ಇಳಿಕೆ; ವಿವಿಧೆಡೆ ಎಷ್ಟಿದೆ ಚಿನ್ನದ ದರ, ಇಲ್ಲಿದೆ ಡೀಟೇಲ್ಸ್

Bullion Market 2023, May 14th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿಗೆ ಏರಿದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.80 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಚಿನ್ನದ ಬೆಲೆ ಮತ್ತೆ ಏರಿಕೆ; ಬೆಳ್ಳಿ ತುಸು ಅಗ್ಗ; ಅಮೆರಿಕದಲ್ಲಿ ಮಾತ್ರ ಸ್ವರ್ಣ ಇಳಿಕೆ; ವಿವಿಧೆಡೆ ಎಷ್ಟಿದೆ ಚಿನ್ನದ ದರ, ಇಲ್ಲಿದೆ ಡೀಟೇಲ್ಸ್
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 14, 2023 | 5:00 AM

ಬೆಂಗಳೂರು: ಚಿನ್ನದ ಬೆಲೆಯ (Gold Rates) ಹೊಯ್ದಾಟ ಮುಂದುವರಿದಿದೆ. ಒಂದೆರಡು ದಿನಗಳ ಕಾಲ ವಿರಮಿಸಿ ತುಸು ಇಳಿಕೆ ಕಂಡಿದ್ದ ಚಿನ್ನ ಮತ್ತೆ ಬೆಲೆ ಹೆಚ್ಚಿಸಿಕೊಳ್ಳುತ್ತಿದೆ. ಬೆಳ್ಳಿ ಬೆಲೆ ಇಳಿಕೆ ಯಥಾಪ್ರಕಾರ ಮುಂದುವರಿದಿದೆ. ಮೇ 5ರಂದು 100 ಗ್ರಾಮ್​ಗೆ 7825 ರೂ ಇದ್ದ ಬೆಳ್ಳಿ ಬೆಲೆ ಇದೀಗ 7480 ರೂಗೆ ಇಳಿದಿದೆ. 9 ದಿನದಲ್ಲಿ 345 ರೂನಷ್ಟು ಬೆಲೆ ಇಳಿಕೆಯಾಗಿದೆ. ಚಿನ್ನದ ಬೆಲೆ ಅಮೆರಿಕ ಹೊರತುಪಡಿಸಿ ಉಳಿದ ಕಡೆ ಹೆಚ್ಚಳ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,850 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿPAN: ಆನ್​ಲೈನ್​ನಲ್ಲಿ ಪ್ಯಾನ್ ಕಾರ್ಡ್ ಹೆಸರು, ಜನ್ಮದಿನಾಂಕ ಬದಲಿಸುವುದು ಹೇಗೆ? ಇಲ್ಲಿದೆ ವಿಧಾನ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 14ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 748 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,850 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,700 ರೂ
  • ಚೆನ್ನೈ: 57,150 ರೂ
  • ಮುಂಬೈ: 56,650 ರೂ
  • ದೆಹಲಿ: 56,800 ರೂ
  • ಕೋಲ್ಕತಾ: 56,650 ರೂ
  • ಕೇರಳ: 56,650 ರೂ
  • ಅಹ್ಮದಾಬಾದ್: 56,700 ರೂ
  • ಜೈಪುರ್: 56,800 ರೂ
  • ಲಕ್ನೋ: 56,800 ರೂ
  • ಭುವನೇಶ್ವರ್: 56,650 ರೂ

ಇದನ್ನೂ ಓದಿSuccess: ಮಣಿಪಾಲದಲ್ಲಿ ಓದಿದ್ದೇ ಟರ್ನಿಂಗ್ ಪಾಯಿಂಟ್; ವಿಜ್ಞಾನಿ ಮುರಳಿ ದಿವಿ 1.3 ಲಕ್ಷ ಕೋಟಿ ಕಂಪನಿ ಒಡೆಯರಾದ ಕಥೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,880 ರಿಂಗಿಟ್ (53,086 ರುಪಾಯಿ)
  • ದುಬೈ: 2255 ಡಿರಾಮ್ (50,513 ರುಪಾಯಿ)
  • ಅಮೆರಿಕ: 615 ಡಾಲರ್ (50,587 ರುಪಾಯಿ)
  • ಸಿಂಗಾಪುರ: 837 ಸಿಂಗಾಪುರ್ ಡಾಲರ್ (51,425 ರುಪಾಯಿ)
  • ಕತಾರ್: 2,315 ಕತಾರಿ ರಿಯಾಲ್ (52,299 ರೂ)
  • ಓಮನ್: 245.50 ಒಮಾನಿ ರಿಯಾಲ್ (52,456 ರುಪಾಯಿ)
  • ಕುವೇತ್: 191.50 ಕುವೇತಿ ದಿನಾರ್ (51,448 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,850 ರೂ
  • ಚೆನ್ನೈ: 7,850 ರೂ
  • ಮುಂಬೈ: 7,480 ರೂ
  • ದೆಹಲಿ: 7,480 ರೂ
  • ಕೋಲ್ಕತಾ: 7,480 ರೂ
  • ಕೇರಳ: 7,850 ರೂ
  • ಅಹ್ಮದಾಬಾದ್: 7,480 ರೂ
  • ಜೈಪುರ್: 7,480 ರೂ
  • ಲಕ್ನೋ: 7,480 ರೂ
  • ಭುವನೇಶ್ವರ್: 7,850 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು