AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ವೀಕೆಂಡ್​ನಲ್ಲಿ ವಿರಮಿಸಿದ ಚಿನ್ನ ಮತ್ತು ಬೆಳ್ಳಿ ಬೆಲೆ; ಭಾರತ ಹಾಗೂ ವಿದೇಶಗಳಲ್ಲಿ ಎಷ್ಟಿದೆ ಚಿನ್ನದ ದರ, ಇಲ್ಲಿದೆ ಡೀಟೇಲ್ಸ್

Bullion Market 2023, May 15th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.80 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ವೀಕೆಂಡ್​ನಲ್ಲಿ ವಿರಮಿಸಿದ ಚಿನ್ನ ಮತ್ತು ಬೆಳ್ಳಿ ಬೆಲೆ; ಭಾರತ ಹಾಗೂ ವಿದೇಶಗಳಲ್ಲಿ ಎಷ್ಟಿದೆ ಚಿನ್ನದ ದರ, ಇಲ್ಲಿದೆ ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 15, 2023 | 5:03 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಮೇ 15ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 56,650 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,480 ರೂ ಇದೆ.
  • ದುಬೈ, ಅಮೆರಿಕ ಸೇರಿದಂತೆ ವಿದೇಶಗಳ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ವಿರಮಿಸಿದೆ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,850 ರೂ ಇದೆ.

ಬೆಂಗಳೂರು: ಈ ವಾರವಿಡೀ ಏರಿಳಿತಗಳನ್ನು ಕಂಡಿದ್ದ ಚಿನ್ನ, ವೀಕೆಂಡ್​ನಲ್ಲಿ ಸ್ತಬ್ಧಗೊಂಡಿದೆ. ಬೆಳ್ಳಿ ಬೆಲೆಯ ಸತತ ಇಳಿಕೆಯೂ ನಿಂತಿದೆ. ಮೇ 5ರಂದು 100 ಗ್ರಾಮ್​ಗೆ 7825 ರೂ ಇದ್ದ ಬೆಳ್ಳಿ ಬೆಲೆ ಇದೀಗ 7480 ರೂಗೆ ಇಳಿದಿದೆ. 9 ದಿನದಲ್ಲಿ 345 ರೂನಷ್ಟು ಬೆಲೆ ಇಳಿಕೆಯಾಗಿದೆ. ಚಿನ್ನದ ಬೆಲೆ ಅಮೆರಿಕ ಹೊರತುಪಡಿಸಿ ಉಳಿದ ಕಡೆ ಹೆಚ್ಚಳ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,850 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿBill Gates: ನಾನು ಓದುವಾಗಲೇ ತಿಳಿಯಬೇಕಿತ್ತು: 5 ಸೂತ್ರ ಬಿಚ್ಚಿಟ್ಟ ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 15ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 748 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,850 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,700 ರೂ
  • ಚೆನ್ನೈ: 57,150 ರೂ
  • ಮುಂಬೈ: 56,650 ರೂ
  • ದೆಹಲಿ: 56,800 ರೂ
  • ಕೋಲ್ಕತಾ: 56,650 ರೂ
  • ಕೇರಳ: 56,650 ರೂ
  • ಅಹ್ಮದಾಬಾದ್: 56,700 ರೂ
  • ಜೈಪುರ್: 56,800 ರೂ
  • ಲಕ್ನೋ: 56,800 ರೂ
  • ಭುವನೇಶ್ವರ್: 56,650 ರೂ

ಇದನ್ನೂ ಓದಿUS Crisis: ಸಾಲದ ಸುಳಿಯಲ್ಲಿ ಅಮೆರಿಕ; ಬಿಲ್ ಕಟ್ಟಲೂ ಆಗದ ಸ್ಥಿತಿ; ಎಷ್ಟಿದೆ ಅದರ ಸಾಲ? ಬೇರೆ ದೇಶಗಳಿಗೆ ಏನು ಎಫೆಕ್ಟ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,880 ರಿಂಗಿಟ್ (53,086 ರುಪಾಯಿ)
  • ದುಬೈ: 2255 ಡಿರಾಮ್ (50,513 ರುಪಾಯಿ)
  • ಅಮೆರಿಕ: 615 ಡಾಲರ್ (50,587 ರುಪಾಯಿ)
  • ಸಿಂಗಾಪುರ: 837 ಸಿಂಗಾಪುರ್ ಡಾಲರ್ (51,425 ರುಪಾಯಿ)
  • ಕತಾರ್: 2,315 ಕತಾರಿ ರಿಯಾಲ್ (52,299 ರೂ)
  • ಓಮನ್: 245.50 ಒಮಾನಿ ರಿಯಾಲ್ (52,456 ರುಪಾಯಿ)
  • ಕುವೇತ್: 191.50 ಕುವೇತಿ ದಿನಾರ್ (51,448 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,850 ರೂ
  • ಚೆನ್ನೈ: 7,850 ರೂ
  • ಮುಂಬೈ: 7,480 ರೂ
  • ದೆಹಲಿ: 7,480 ರೂ
  • ಕೋಲ್ಕತಾ: 7,480 ರೂ
  • ಕೇರಳ: 7,850 ರೂ
  • ಅಹ್ಮದಾಬಾದ್: 7,480 ರೂ
  • ಜೈಪುರ್: 7,480 ರೂ
  • ಲಕ್ನೋ: 7,480 ರೂ
  • ಭುವನೇಶ್ವರ್: 7,850 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ