Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ವಾರಾರಂಭದಲ್ಲಿ ಏರಿಳಿತ ಕಾಣದ ಚಿನ್ನ, ಬೆಳ್ಳಿ ಬೆಲೆ; ಭಾರತ ಹಾಗೂ ವಿದೇಶಗಳಲ್ಲಿ ಎಷ್ಟಿದೆ ಚಿನ್ನದ ದರ, ಇಲ್ಲಿದೆ ಡೀಟೇಲ್ಸ್

Bullion Market 2023, May 16th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.80 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ವಾರಾರಂಭದಲ್ಲಿ ಏರಿಳಿತ ಕಾಣದ ಚಿನ್ನ, ಬೆಳ್ಳಿ ಬೆಲೆ; ಭಾರತ ಹಾಗೂ ವಿದೇಶಗಳಲ್ಲಿ ಎಷ್ಟಿದೆ ಚಿನ್ನದ ದರ, ಇಲ್ಲಿದೆ ಡೀಟೇಲ್ಸ್
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 16, 2023 | 5:01 AM

ಬೆಂಗಳೂರು: ಈ ವಾರವಿಡೀ ಏರಿಳಿತಗಳನ್ನು ಕಂಡಿದ್ದ ಚಿನ್ನ, ವೀಕೆಂಡ್​ನಲ್ಲಿ ಸ್ತಬ್ಧಗೊಂಡಿತ್ತು. ಇದೀಗ ಈ ವಾರಾರಂಭದಲ್ಲೂ ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಬೆಳ್ಳಿ ಬೆಲೆಯ ಸತತ ಇಳಿಕೆಯೂ ನಿಂತಿದೆ. ಮೇ 5ರಂದು 100 ಗ್ರಾಮ್​ಗೆ 7825 ರೂ ಇದ್ದ ಬೆಳ್ಳಿ ಬೆಲೆ ಇದೀಗ 7480 ರೂಗೆ ಇಳಿದಿದೆ. 9 ದಿನದಲ್ಲಿ 345 ರೂನಷ್ಟು ಬೆಲೆ ಇಳಿಕೆಯಾಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,850 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿTrade Deficit: ಭಾರತದ ಟ್ರೇಡ್ ಡೆಫಿಸಿಟ್ 15.24 ಬಿಲಿಯನ್ ಡಾಲರ್​ಗೆ ಇಳಿಕೆ; ಇದು 21 ತಿಂಗಳಲ್ಲೇ ಅತಿ ಕಡಿಮೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 16ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 748 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,850 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 785 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,700 ರೂ
  • ಚೆನ್ನೈ: 57,150 ರೂ
  • ಮುಂಬೈ: 56,650 ರೂ
  • ದೆಹಲಿ: 56,800 ರೂ
  • ಕೋಲ್ಕತಾ: 56,650 ರೂ
  • ಕೇರಳ: 56,650 ರೂ
  • ಅಹ್ಮದಾಬಾದ್: 56,700 ರೂ
  • ಜೈಪುರ್: 56,800 ರೂ
  • ಲಕ್ನೋ: 56,800 ರೂ
  • ಭುವನೇಶ್ವರ್: 56,650 ರೂ

ಇದನ್ನೂ ಓದಿCost Of Guarantees: ಕಾಂಗ್ರೆಸ್​ನ 5 ಗ್ಯಾರಂಟಿಗಳ ಜಾರಿಯಿಂದ ಕರ್ನಾಟಕದ ಬೊಕ್ಕಸಕ್ಕೆ ಆಗುವ ಖರ್ಚೆಷ್ಟು? ಇಲ್ಲಿದೆ ಲೆಕ್ಕಾಚಾರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,880 ರಿಂಗಿಟ್ (53,086 ರುಪಾಯಿ)
  • ದುಬೈ: 2255 ಡಿರಾಮ್ (50,513 ರುಪಾಯಿ)
  • ಅಮೆರಿಕ: 615 ಡಾಲರ್ (50,587 ರುಪಾಯಿ)
  • ಸಿಂಗಾಪುರ: 837 ಸಿಂಗಾಪುರ್ ಡಾಲರ್ (51,425 ರುಪಾಯಿ)
  • ಕತಾರ್: 2,315 ಕತಾರಿ ರಿಯಾಲ್ (52,299 ರೂ)
  • ಓಮನ್: 245.50 ಒಮಾನಿ ರಿಯಾಲ್ (52,456 ರುಪಾಯಿ)
  • ಕುವೇತ್: 191.50 ಕುವೇತಿ ದಿನಾರ್ (51,448 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,850 ರೂ
  • ಚೆನ್ನೈ: 7,850 ರೂ
  • ಮುಂಬೈ: 7,480 ರೂ
  • ದೆಹಲಿ: 7,480 ರೂ
  • ಕೋಲ್ಕತಾ: 7,480 ರೂ
  • ಕೇರಳ: 7,850 ರೂ
  • ಅಹ್ಮದಾಬಾದ್: 7,480 ರೂ
  • ಜೈಪುರ್: 7,480 ರೂ
  • ಲಕ್ನೋ: 7,480 ರೂ
  • ಭುವನೇಶ್ವರ್: 7,850 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ