ಬೆಂಗಳೂರು: ಈ ವಾರವಿಡೀ ಏರಿಳಿತಗಳನ್ನು ಕಂಡಿದ್ದ ಚಿನ್ನ, ವೀಕೆಂಡ್ನಲ್ಲಿ ಸ್ತಬ್ಧಗೊಂಡಿತ್ತು. ಇದೀಗ ಈ ವಾರಾರಂಭದಲ್ಲೂ ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಬೆಳ್ಳಿ ಬೆಲೆಯ ಸತತ ಇಳಿಕೆಯೂ ನಿಂತಿದೆ. ಮೇ 5ರಂದು 100 ಗ್ರಾಮ್ಗೆ 7825 ರೂ ಇದ್ದ ಬೆಳ್ಳಿ ಬೆಲೆ ಇದೀಗ 7480 ರೂಗೆ ಇಳಿದಿದೆ. 9 ದಿನದಲ್ಲಿ 345 ರೂನಷ್ಟು ಬೆಲೆ ಇಳಿಕೆಯಾಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,850 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: Trade Deficit: ಭಾರತದ ಟ್ರೇಡ್ ಡೆಫಿಸಿಟ್ 15.24 ಬಿಲಿಯನ್ ಡಾಲರ್ಗೆ ಇಳಿಕೆ; ಇದು 21 ತಿಂಗಳಲ್ಲೇ ಅತಿ ಕಡಿಮೆ
ಇದನ್ನೂ ಓದಿ: Cost Of Guarantees: ಕಾಂಗ್ರೆಸ್ನ 5 ಗ್ಯಾರಂಟಿಗಳ ಜಾರಿಯಿಂದ ಕರ್ನಾಟಕದ ಬೊಕ್ಕಸಕ್ಕೆ ಆಗುವ ಖರ್ಚೆಷ್ಟು? ಇಲ್ಲಿದೆ ಲೆಕ್ಕಾಚಾರ
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)