ಬೆಂಗಳೂರು: ಕಳೆದ ಹಲವು ದಿನಗಳಿಂದ ಬಹುತೇಕ ಸ್ತಬ್ಧಗೊಂಡಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Prices) ಬುಧವಾರ ತುಸು ಏರಿಕೆ ಕಂಡಿದೆ. ಮಂಗಳವಾರದಿಂದ ಚಿನ್ನದ ಬೆಲೆ ಹಗ್ಗ ಜಗ್ಗಾಟ ಶುರುವಾಗಿದೆ. ಮಂಗಳವಾರ ಒಂದು ಹಂತದಲ್ಲಿ ಚಿನ್ನದ ಬೆಲೆ ಕುಸಿತ ಕಂಡರೆ, ಮತ್ತೀಗ ಇಳಿಕೆಯಾಗಿದೆ. ಸತತವಾಗಿ ಇಳಿಯುತ್ತಿದ್ದ ಬೆಳ್ಳಿ ಬೆಲೆ ತುಸು ಏರಿಕೆ ಕಂಡಿದೆ. ಮೇ 5ರಂದು 100 ಗ್ರಾಮ್ಗೆ 7825 ರೂ ಇದ್ದ ಬೆಳ್ಳಿ ಬೆಲೆ ಇದೀಗ 7510 ರೂ ಆದೆ. 9 ದಿನದಲ್ಲಿ 345 ರೂನಷ್ಟು ಬೆಲೆ ಇಳಿಕೆಯಾಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 56,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 61,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,510 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 56,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,880 ರುಪಾಯಿಯಲ್ಲಿ ಇದೆ.
ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.
ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: Education Loan: ಕೋರ್ಸ್ ಫೀಸ್ ಮೊತ್ತವಷ್ಟೇ ಸಾಲ ಸಿಗುತ್ತಾ? ಎಜುಕೇಶನ್ ಲೋನ್ ಪಡೆಯುವ ಮುನ್ನ ಈ ವಿಚಾರಗಳು ತಿಳಿದಿರಲಿ
ಇದನ್ನೂ ಓದಿ: Rs 30 Down: ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ಗೆ 30 ರೂವರೆಗೂ ಕಡಿತ; ಪಾಕಿಸ್ತಾನ ಜನತೆಗೆ ಬಂಪರ್ ಗಿಫ್ಟ್
(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)