Gold Silver Price on 17th May: ಚಿನ್ನದ ಬೆಲೆ ಸತತ ಹೆಚ್ಚಳ; ಗ್ರಾಮ್​ಗೆ 70 ರೂನಷ್ಟು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 May 17th: ಚಿನ್ನ, ಬೆಳ್ಳಿ ಬೆಲೆ ಶುಕ್ರವಾರ ಭರ್ಜರಿ ಹೆಚ್ಚಳ ಕಂಡಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,020 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 89.10 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 67,850 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,675 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 17th May: ಚಿನ್ನದ ಬೆಲೆ ಸತತ ಹೆಚ್ಚಳ; ಗ್ರಾಮ್​ಗೆ 70 ರೂನಷ್ಟು ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: May 17, 2024 | 5:00 AM

ಬೆಂಗಳೂರು, ಮೇ 17: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಮತ್ತೆ ಭರ್ಜರಿ ಏರಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 70 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಬರೋಬ್ಬಿ ಒಂದೂವರೆ ರೂ ಅಥವ 150 ಪೈಸೆಯಷ್ಟು ಜಾಸ್ತಿಯಾಗಿದೆ. ವಿದೇಶಗಳಲ್ಲೂ ಬಹುತೇಕ ಎಲ್ಲೆಡೆ ಚಿನ್ನದ ಬೆಲೆ ಹೆಚ್ಚಾಗಿರುವುದು ಕಂಡುಬಂದಿದೆ. ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,020 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,910 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,675 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 17ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 891 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,020 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 867.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,850 ರೂ
  • ಚೆನ್ನೈ: 67,950 ರೂ
  • ಮುಂಬೈ: 67,850 ರೂ
  • ದೆಹಲಿ: 68,000 ರೂ
  • ಕೋಲ್ಕತಾ: 67,850 ರೂ
  • ಕೇರಳ: 67,850 ರೂ
  • ಅಹ್ಮದಾಬಾದ್: 67,900 ರೂ
  • ಜೈಪುರ್: 68,000 ರೂ
  • ಲಕ್ನೋ: 68,000 ರೂ
  • ಭುವನೇಶ್ವರ್: 67,850 ರೂ

ಇದನ್ನೂ ಓದಿ: ಗೋಲ್ಡ್ ಇಟಿಎಫ್​ಗಳಿಂದ ವರ್ಷದಲ್ಲಿ ಶೇ. 20ರಷ್ಟು ರಿಟರ್ನ್; ಗೋಲ್ಡ್ ಬಾಂಡ್​ಗೂ ಇದಕ್ಕೂ ಏನು ವ್ಯತ್ಯಾಸ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,540 ರಿಂಗಿಟ್ (63,140 ರುಪಾಯಿ)
  • ದುಬೈ: 2,672.50 ಡಿರಾಮ್ (60,750 ರುಪಾಯಿ)
  • ಅಮೆರಿಕ: 725 ಡಾಲರ್ (60,533 ರುಪಾಯಿ)
  • ಸಿಂಗಾಪುರ: 996 ಸಿಂಗಾಪುರ್ ಡಾಲರ್ (61,848 ರುಪಾಯಿ)
  • ಕತಾರ್: 2,715 ಕತಾರಿ ರಿಯಾಲ್ (62,180 ರೂ)
  • ಸೌದಿ ಅರೇಬಿಯಾ: 2,740 ಸೌದಿ ರಿಯಾಲ್ (61,000 ರುಪಾಯಿ)
  • ಓಮನ್: 289 ಒಮಾನಿ ರಿಯಾಲ್ (62,690 ರುಪಾಯಿ)
  • ಕುವೇತ್: 227 ಕುವೇತಿ ದಿನಾರ್ (61,751 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,675 ರೂ
  • ಚೆನ್ನೈ: 9,250 ರೂ
  • ಮುಂಬೈ: 8,910 ರೂ
  • ದೆಹಲಿ: 8,910 ರೂ
  • ಕೋಲ್ಕತಾ: 8,910 ರೂ
  • ಕೇರಳ: 9,250 ರೂ
  • ಅಹ್ಮದಾಬಾದ್: 8,910 ರೂ
  • ಜೈಪುರ್: 8,910 ರೂ
  • ಲಕ್ನೋ: 8,910 ರೂ
  • ಭುವನೇಶ್ವರ್: 9,250 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us