Gold Rates: ಚಿನ್ನದ ಬೆಲೆ ಕಣ್ಣಾಮುಚ್ಚಾಲೆ ಆಟ; ಮತ್ತೆ ಭರ್ಜರಿ ಇಳಿತ; ಬೆಳ್ಳಿ ಬೆಲೆ ಇನ್ನಷ್ಟು ಇಳಿತ; ಇವತ್ತಿನ ಚಿನ್ನ ಬೆಳ್ಳಿ ದರ ಎಷ್ಟಿದೆ ಇಲ್ಲಿ ನೋಡಿ

Bullion Market 2023, May 18th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,420 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.60 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಚಿನ್ನದ ಬೆಲೆ ಕಣ್ಣಾಮುಚ್ಚಾಲೆ ಆಟ; ಮತ್ತೆ ಭರ್ಜರಿ ಇಳಿತ; ಬೆಳ್ಳಿ ಬೆಲೆ ಇನ್ನಷ್ಟು ಇಳಿತ; ಇವತ್ತಿನ ಚಿನ್ನ ಬೆಳ್ಳಿ ದರ ಎಷ್ಟಿದೆ ಇಲ್ಲಿ ನೋಡಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 18, 2023 | 5:00 AM

ಬೆಂಗಳೂರು: ಚಿನ್ನದ ಬೆಲೆ ಏರಿಳಿಕೆ ಆಟ ಮುಂದುವರಿದಿದೆ. ಕಳೆದ ಹಲವು ದಿನಗಳಿಂದ ಬಹುತೇಕ ಸ್ತಬ್ಧಗೊಂಡು ಬುಧವಾರ ತುಸು ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver Prices) ಗುರುವಾರ ಇಳಿಕೆ ಕಂಡಿದೆ. ಚಿನ್ನದ ಬೆಲೆಯ ಹಗ್ಗ ಜಗ್ಗಾಟ ಮುಂದುವರಿದರೆ ಬೆಳ್ಳಿ ಬೆಲೆ ಬಹುತೇಕ ಇಳಿಕೆಯ ಹಾದಿಯಲ್ಲಿ ಸ್ಥಿರತೆ ಹೊಂದಿದೆ. ಮೇ 5ರಂದು 100 ಗ್ರಾಮ್​ಗೆ 7825 ರೂ ಇದ್ದ ಬೆಳ್ಳಿ ಬೆಲೆ ಇದೀಗ 7460 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,420 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,460 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,820 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿFertilizer Subsidy: ಮುಂಗಾರು ಬೆಳೆಗೆ ಒಂದು ಲಕ್ಷ ಕೋಟಿ ರೂ ರಸಗೊಬ್ಬರ ಸಬ್ಸಿಡಿ: ಕೇಂದ್ರ ಸಮಿತಿ ಅನುಮೋದನೆ; 12ಕೋಟಿ ರೈತರಿಗೆ ಪ್ರಯೋಜನ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 18ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,420 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 746 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 782 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,350 ರೂ
  • ಚೆನ್ನೈ: 56,700 ರೂ
  • ಮುಂಬೈ: 56,300 ರೂ
  • ದೆಹಲಿ: 56,450 ರೂ
  • ಕೋಲ್ಕತಾ: 56,300 ರೂ
  • ಕೇರಳ: 56,300 ರೂ
  • ಅಹ್ಮದಾಬಾದ್: 56,350 ರೂ
  • ಜೈಪುರ್: 56,450 ರೂ
  • ಲಕ್ನೋ: 56,450 ರೂ
  • ಭುವನೇಶ್ವರ್: 56,300 ರೂ

ಇದನ್ನೂ ಓದಿArecanut Price: ಇಂದಿನ ಅಡಿಕೆ ಧಾರಣೆ, ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (52,050 ರುಪಾಯಿ)
  • ದುಬೈ: 2227.50 ಡಿರಾಮ್ (49,962 ರುಪಾಯಿ)
  • ಅಮೆರಿಕ: 615 ಡಾಲರ್ (50,677 ರುಪಾಯಿ)
  • ಸಿಂಗಾಪುರ: 830 ಸಿಂಗಾಪುರ್ ಡಾಲರ್ (50,927 ರುಪಾಯಿ)
  • ಕತಾರ್: 2,295 ಕತಾರಿ ರಿಯಾಲ್ (51,914 ರೂ)
  • ಓಮನ್: 243 ಒಮಾನಿ ರಿಯಾಲ್ (52,039 ರುಪಾಯಿ)
  • ಕುವೇತ್: 190 ಕುವೇತಿ ದಿನಾರ್ (50,957 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,820 ರೂ
  • ಚೆನ್ನೈ: 7,820 ರೂ
  • ಮುಂಬೈ: 7,460 ರೂ
  • ದೆಹಲಿ: 7,460 ರೂ
  • ಕೋಲ್ಕತಾ: 7,460 ರೂ
  • ಕೇರಳ: 7,820 ರೂ
  • ಅಹ್ಮದಾಬಾದ್: 7,460 ರೂ
  • ಜೈಪುರ್: 7,460 ರೂ
  • ಲಕ್ನೋ: 7,460 ರೂ
  • ಭುವನೇಶ್ವರ್: 7,820 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್