AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates: ಬೆಲೆ ಇಳಿಕೆಯಲ್ಲಿ ಬೆಳ್ಳಿ ಜೊತೆ ಪೈಪೋಟಿಗೆ ಬಿದ್ದ ಚಿನ್ನ; ವಿದೇಶಗಳಲ್ಲೂ ಚಿನ್ನದ ಬೆಲೆ ಕುಸಿತ; ಎಲ್ಲೆಲ್ಲೆ ಎಷ್ಟೆಷ್ಟಿದೆ ಚಿನ್ನದ ದರ, ಇಲ್ಲಿದೆ ಡೀಟೇಲ್ಸ್

Bullion Market 2023, May 19th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,200 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Rates: ಬೆಲೆ ಇಳಿಕೆಯಲ್ಲಿ ಬೆಳ್ಳಿ ಜೊತೆ ಪೈಪೋಟಿಗೆ ಬಿದ್ದ ಚಿನ್ನ; ವಿದೇಶಗಳಲ್ಲೂ ಚಿನ್ನದ ಬೆಲೆ ಕುಸಿತ; ಎಲ್ಲೆಲ್ಲೆ ಎಷ್ಟೆಷ್ಟಿದೆ ಚಿನ್ನದ ದರ, ಇಲ್ಲಿದೆ ಡೀಟೇಲ್ಸ್
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 19, 2023 | 4:59 AM

Share

ಮುಖ್ಯಾಂಶಗಳು

  • ಭಾರತದಲ್ಲಿ ಮೇ 19ರಂದು 22 ಕ್ಯಾರಟ್​ನ 10 ಗ್ರಾಮ್ ಚಿನ್ನದ ಬೆಲೆ 56,100 ರುಪಾಯಿ. 100 ಗ್ರಾಮ್ ಬೆಳ್ಳಿ ಬೆಲೆ 7,450 ರೂ ಇದೆ.
  • ದುಬೈನಲ್ಲಿ ಚಿನ್ನದ ಬೆಲೆ ಮತ್ತೆ 50,000 ರೂ ಒಳಗೆ ಬಂದಿದೆ. ಬೇರೆಡೆಯಲ್ಲಿಯೂ ಚಿನ್ನದ ಬೆಲೆ ಇಳಿಕೆ ಆಗಿದೆ
  • ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,810 ರೂ ಇದೆ.

ಬೆಂಗಳೂರು: ಬೆಲೆ ಇಳಿಕೆಯಲ್ಲಿ ಬೆಳ್ಳಿ ಜೊತೆ ಚಿನ್ನವೂ ಪೈಪೋಟಿಗೆ ಬಿದ್ದಂತಿದೆ. ಚಿನ್ನದ ಬೆಲೆ ಸತತವಾಗಿ ಇಳಿಯಲು ಮತ್ತೆ ಆರಂಭಿಸಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಇಳಿಕೆಯಾಗುತ್ತಿರುವುದು ಇದು 4ನೇ ಬಾರಿ. ಈ 10 ದಿನದಲ್ಲಿ 10 ಗ್ರಾಮ್ ಚಿನ್ನದ ಬೆಲೆ 600 ರೂನಷ್ಟು ಇಳಿದಿದೆ. ಬೆಳ್ಳಿ ಬೆಲೆಯೂ 10 ದಿನದಲ್ಲಿ ಏರಿಕೆಯಾಗಿರುವುದು ಒಮ್ಮೆ ಮಾತ್ರ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,810 ರುಪಾಯಿಯಲ್ಲಿ ಇದೆ.

ಜಾಗತಿಕವಾಗಿ ಅತಂತ್ರ ಆರ್ಥಿಕ ಸ್ಥಿತಿ ಇರುವುದರಿಂದ ಹೂಡಿಕೆದಾರರಲ್ಲಿ ಗೊಂದಲ ಮನೆಮಾಡಿದೆ. ಇದೇ ಕಾರಣಕ್ಕೆ ಚಿನ್ನದ ಮೇಲಿನ ಹೂಡಿಕೆ ಸುರಕ್ಷಿತ ಮಾರ್ಗ ಎನಿಸಿದೆ. ಮುಂದೆಯೂ ಆರ್ಥಿಕ ಗೊಂದಲಮಯ ಸ್ಥಿತಿ ಮುಂದುವರಿಯುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆ ಆಗುವ ಸಾಧ್ಯತೆ ಬಹಳ ಕಡಿಮೆ.

ಚಿನ್ನದ ಬೆಲೆ ಏರಿಳಿತಕ್ಕೆ ಏನು ಕಾರಣ?

ಅಮೆರಿಕದಲ್ಲಿ ಅಲ್ಲಿನ ಫೆಡರಲ್ ಬ್ಯಾಂಕು ಈ ಬಾರಿ ಬಡ್ಡಿ ದರ ಏರಿಕೆ ಮಾಡುವ ಸಾಧ್ಯತೆ ಇಲ್ಲದಿರುವುದರಿಂದ ಚಿನ್ನದ ಮೇಲೆ ಹೂಡಿಕೆ ಹೆಚ್ಚುವ ಸಾಧ್ಯತೆ ಇದೆ. ಉದ್ಯೋಗ ಪ್ರಮಾಣ ಹೆಚ್ಚಿರುವ ಬಗ್ಗೆ ವರದಿಗಳು ಬಂದಿವೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನೂ ತುಟ್ಟಿಯಾಗುತ್ತಾ ಹೋಗಬಹುದು. ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ: SBI Profit: ಎಸ್​ಬಿಐ ಸಖತ್ ಲಾಭ; ಷೇರುದಾರರಿಗೆ ಡಿವಿಡೆಂಡ್ ಸುಗ್ಗಿ; ಐಟಿಸಿ, ಗೇಲ್ ಲಾಭ ಎಷ್ಟಿದೆ ನೋಡಿ?

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 19ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,200 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,250 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 781 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,150 ರೂ
  • ಚೆನ್ನೈ: 56,500 ರೂ
  • ಮುಂಬೈ: 56,100 ರೂ
  • ದೆಹಲಿ: 56,250 ರೂ
  • ಕೋಲ್ಕತಾ: 56,100 ರೂ
  • ಕೇರಳ: 56,100 ರೂ
  • ಅಹ್ಮದಾಬಾದ್: 56,150 ರೂ
  • ಜೈಪುರ್: 56,250 ರೂ
  • ಲಕ್ನೋ: 56,250 ರೂ
  • ಭುವನೇಶ್ವರ್: 56,100 ರೂ

ಇದನ್ನೂ ಓದಿ: Insurance Bonus: ಎಚ್​ಡಿಎಫ್​ಸಿ ಲೈಫ್ ಇನ್ಷೂರೆನ್ಸ್​ನಿಂದ ದಾಖಲೆ ಬೋನಸ್: 3,660 ಕೋಟಿ ರೂ ಘೋಷಣೆ; ಯಾರಿಗೆಲ್ಲಾ ಸಿಗುತ್ತೆ ಈ ಬೋನಸ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (51,929 ರುಪಾಯಿ)
  • ದುಬೈ: 2215 ಡಿರಾಮ್ (49,861 ರುಪಾಯಿ)
  • ಅಮೆರಿಕ: 610 ಡಾಲರ್ (50,315 ರುಪಾಯಿ)
  • ಸಿಂಗಾಪುರ: 828 ಸಿಂಗಾಪುರ್ ಡಾಲರ್ (50,813 ರುಪಾಯಿ)
  • ಕತಾರ್: 2,280 ಕತಾರಿ ರಿಯಾಲ್ (51,761 ರೂ)
  • ಓಮನ್: 241 ಒಮಾನಿ ರಿಯಾಲ್ (51,811 ರುಪಾಯಿ)
  • ಕುವೇತ್: 189 ಕುವೇತಿ ದಿನಾರ್ (50,846 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,810 ರೂ
  • ಚೆನ್ನೈ: 7,810 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,810 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,810 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ